ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಶಾಂತ್ ಕೇಸ್: ಜಾರಿ ನಿರ್ದೇಶನಾಲಯ ವಿಚಾರಣೆಗೆ ರಿಯಾ ಹಾಜರ್

|
Google Oneindia Kannada News

ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.

ಸುಶಾಂತ್ ಕೇಸ್: ಸಿಬಿಐನಿಂದ ಎಫ್ಐಆರ್, ರಿಯಾಗೆ ಇಡಿ ಸಮನ್ಸ್ಸುಶಾಂತ್ ಕೇಸ್: ಸಿಬಿಐನಿಂದ ಎಫ್ಐಆರ್, ರಿಯಾಗೆ ಇಡಿ ಸಮನ್ಸ್

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.

Sushant Singh Rajput Death Case: Rhea Chakraborty Arrives At Ed Office In Mumbai

ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.

ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು.

ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.

English summary
Sushant Singh Rajput death case: Rhea Chakraborty arrives at Enforcement Directorate (ED) office in Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X