ಮುಂಬೈನಲ್ಲಿ ಶಂಕಿತ ಲಷ್ಕರ್ ಇ ತೈಬಾ ಉಗ್ರ ಬಲೆಗೆ

By: ವಿಕಾಸ್ ನಂಜಪ್ಪ
Subscribe to Oneindia Kannada

ಮುಂಬೈ, ಜುಲೈ 17 : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಲಷ್ಕರ್ ಇ ತೈಬಾದ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಉತ್ತರಪ್ರದೇಶದ ಸಲೀಂ ಖಾನ್ ಬಂಧಿತ. ಆತ ಲಷ್ಕರ್ ಇ ತೈಬಾ ಉಗ್ರ ಸಂಘಟನೆಗಾಗಿ ಕೆಲಸ ಮಾಡುವ ಶಂಕೆ ಇದ್ದು, ಆತ ಉತ್ತರಪ್ರದೇಸದ ಫತೇಪುರದವನು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಹಿಜ್ಬುಲ್ ಉಗ್ರರ ಸೆರೆ

ಪೊಲೀಸರು ಅತನಿಂದ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಈಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸಂದೀಪ್ ಕುಮಾರ್ ಶರ್ಮಾ ಅಲಿಯಾಸ್ ಅದಿಲ್ ಎಂಬ ಉತ್ತರಪ್ರದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದರು. ಆತ ಲಷ್ಕರ್ ಇ ತೈಬಾ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ.

Suspected Lashkar terrorist arrested in Mumbai

ದಕ್ಷಿಣ ಕಾಶ್ಮೀರದಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಹತ್ಯೆಯ ಸಂಬಂಧ ಆತನನ್ನು ಬಂಧಿಸಲಾಗಿತ್ತು. ಕಳೆದ ಒಂಬತ್ತು ವರ್ಷಗಳಿಂದ ಈತನಿಗಾಗಿ ಹುಡುಕಾಟ ನಡೆಯುತ್ತಿತ್ತು. ಸಲೀಂ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಬಂಧಿಸಲಾಗಿದೆ. ಆತ ಎಲ್ಲಿಂದ ಬರುತ್ತಿದ್ದ ಎಂಬ ವಿಚಾರವನ್ನು ಮಾತ್ರ ಬಹಿರಂಗ ಪಡಿಸಿಲ್ಲ.

ಅಮರನಾಥ ಯಾತ್ರೆ ದಾಳಿ, ಪೊಲೀಸ್ ಬಂಧನ, ಪಿಡಿಪಿ ಶಾಸಕನ ವಿಚಾರಣೆ

Modi government will not allow cricket series between India and Pakistan

ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ ಐ ಹಾಗೂ ಅಲ್ಲಿನ ವಿವಿಧ ಉಗ್ರ ಸಂಘಟನೆಗಳು ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಈ ರೀತಿ ಏಜೆಂಟರನ್ನು ನೇಮಿಸಿಕೊಳ್ಳುವುದು ಹೆಚ್ಚಾಗಿದ್ದು, ಅವುಗಳ ಪ್ರಯತ್ನವನ್ನು ವಿಫಲಗೊಳಿಸುವಲ್ಲಿ ದೇಶದ ಗುಪ್ತಚರ ಸಂಸ್ಥೆಗಳು ಯಶಸ್ವಿಯಾಗಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A suspected Lashkar-e-Tayiba terrorist has been arrested from the Mumbai airport. A resident of Uttar Pradesh, Saleem Khan was picked up from the airport earlier today.
Please Wait while comments are loading...