ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1993 ಮುಂಬೈ ಸ್ಫೋಟ: ಅಬು ಸಲೇಂಗೆ ಜೀವಾವಧಿ, ಇನ್ನಿಬ್ಬರಿಗೆ ಗಲ್ಲು

|
Google Oneindia Kannada News

Recommended Video

1993 ಮುಂಬೈ ಸ್ಫೋಟ: ಅಬು ಸಲೇಂಗೆ ಜೀವಾವಧಿ, ಇನ್ನಿಬ್ಬರಿಗೆ ಗಲ್ಲು | Oneindia Kannada

ಮುಂಬೈ, ಸೆಪ್ಟೆಂಬರ್ 7: 1993 ದ ರೂವಾರಿ ಅಬು ಸಲೇಂ ಗೆ ವಿಶೇಷ ಟಾಡಾ(Terrorist and Disruptive Activity) ನ್ಯಾಯಾಲಯ ಇಂದು(ಸೆ.7) ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ದಾವೂದ್ ಇಬ್ರಾಹಿಂ ಬಲಗೈ ಬಂಟ ಅಬು ಸಲೇಂ ಮತ್ತು ಕರೀಮುಲ್ಲಾ ಖಾನ್ ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರೆ, ತಾಹಿರ್ ಮರ್ಚೆಂಟ್ ಮತ್ತು ಫಿರೋಜ್ ಖಾನ್ ಗೆ ಗಲ್ಲು ಶಿಕ್ಷೆ ವಿಧಿಸಿದೆ. ಇನ್ನೊಬ್ಬ ಅಪರಾಧಿ ರಿಯಾಜ್ ಸಿದ್ದಿಖಿಗೆ 10 ವರ್ಷಗಳ ಸೆರೆವಾಸದ ಶಿಕ್ಷೆ ವಿಧಿಸಲಾಗಿದೆ.

ಇದೇ ವರ್ಷದ ಜೂನ್ ನಲ್ಲಿ, ಸ್ಫೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿದಂತೆ 6 ಜನರನ್ನು ಅಪರಾಧಿಗಳು ಎಂದು ಟಾಡಾ ನ್ಯಾಯಾಲ ತೀರ್ಪು ನೀಡಿತ್ತು. ಆದರೆ ಕೋರ್ಟು ತೀರ್ಪು ನೀಡಿದ ಎರಡು ವಾರದಲ್ಲಿ ಮುಸ್ತಫಾ ದೋಸ್ಸಾ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಇಂದು ಉಳಿದ 5 ಜನರಿಗೆ ಶಿಕ್ಷೆ ಪ್ರಕಟಿಸಲಾಗಿದೆ.

ಮಾರ್ಚ್ 12, 1993 ರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 257 ಜನ ಅಸುನೀಗಿದ್ದರೆ, 700 ಜನ ಗಂಭೀರವಾಗಿ ಗಾಯಗೊಂಡಿದ್ದರು. ಬಾಂಬ್ ಸ್ಫೋಟದ ಹಿಂದಿದ್ದಿದ್ದು ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಎಂಬುದು ಸಾಬೀತಾಗಿತ್ತು.

English summary
A special Terrorist and Disruptive Activity (TADA) Court announced the quantum of sentence against all the convicts of the 1993 Mumbai Bomb Blasts Case on Sep 7. 2 convicts awarded life imprisonment and other two awarded death penalty.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X