ರಾಜಪಕ್ಸೆ ಪರ ಪ್ರಚಾರ, ಸಲ್ಲೂ ವಿರುದ್ಧ ತಮಿಳರ ಪ್ರತಿಭಟನೆ
ಮುಂಬೈ, ಜ.4: ಶ್ರೀಲಂಕಾದ ಅಧ್ಯಕ್ಷ ಮಹೀಂದ್ರ ರಾಜಪಕ್ಸೆ ಪರ ಚುನಾವಣೆಯಲ್ಲಿ ಪ್ರಚಾರ ನಡೆಸಿದ ಬಾಲಿವುಡ್ ನಟ ಸಲ್ಮಾನ್‌ಖಾನ್ ವಿರುದ್ಧ ತಮಿಳರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿನಲ್ಲಿ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮುಂಬೈನ ಸಲ್ಮಾನ್ ನಿವಾಸದ ಎದುರು ತಮಿಳು ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಪಕ್ಷಭೇದ ಮರೆತು ಸಲ್ಮಾನ್‌ಖಾನ್ ವಿರುದ್ಧ ಕಿಡಿಕಾರಿವೆ. ತಕ್ಷಣವೇ ಅವರ ವಿರುದ್ಧ ಕೇಂದ್ರ ಸರ್ಕಾರ ಕಾನೂನು ಕ್ರಮ ಜರುಗಿಸಬೇಕೆಂದು ಅನೇಕ ಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ. [ಜಾಕ್ವಲಿನ್ ಜೊತೆ ಸಲ್ಲೂ ಸುತ್ತಾಟವೇಕೆ?]
ತಮಿಳುನಾಡಿನಾದ್ಯಂತ ಭಾರೀ ಪ್ರತಿಭಟನೆ ನಡೆಸಿದ ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಮುಂಬೈನಲ್ಲಿ ಸಲ್ಮಾನ್ ನಿವಾಸದ ಎದುರು ಪ್ರತಿಭಟನೆ ಆರಂಭವಾಗಿತ್ತು. ಅದರೆ, ಸಲ್ಮಾನ್ ನಿವಾಸಕ್ಕೆ ಪೊಲೀಸರು ಭಾರೀ ಭದ್ರತೆ ಒದಗಿಸಿ, ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಸಲ್ಮಾನ್‌ಖಾನ್‌ಗೆ ತಮಿಳರಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಭದ್ರತೆಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ತಿಳಿಸಿದ್ದಾರೆ. ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಸಲ್ಮಾನ್‌ಖಾನ್ ವಿರುದ್ಧ ಪ್ರತಿಭಟನೆ ಜೋರಾಗಿದೆ. ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.
Protests outside #salman khan's house in Mumbai. Tamil group protesting against the actor. pic.twitter.com/vuAmhr33Ya
— Rohit Khilnani (@rohitkhilnani) January 4, 2015 ತಕ್ಷಣವೇ ಸಲ್ಮಾನ್‌ಖಾನ್ ಅವರು ಬಹಿರಂಗ ಕ್ಷಮೆ ಯಾಚಿಸಬೇಕು. ಇನ್ನು ಮುಂದೆ ಶ್ರೀಲಂಕಾದಲ್ಲಿ ಪ್ರಚಾರ ನಡೆಸುವುದಿಲ್ಲ ಎಂದು ವಾಗ್ದಾನ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಕೊಲಂಬೋದಲ್ಲಿ ಸಲ್ಮಾನ್‌ಖಾನ್ ರಾಜಪಕ್ಸೆ ಪರ ಪ್ರಚಾರ ನಡೆಸಿದ್ದರು. ಇದು ತಮಿಳರ ಕೆಂಗಣ್ಣಿಗೆ ಗುರಿಯಾಗಿತ್ತು.
ಜಾಫ್ನಾದಲ್ಲಿ ಎಲ್‌ಟಿಟಿಇ ಉಗ್ರರ ಮೇಲೆ ದಾಳಿ ನಡೆಸಿದಾಗ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ. ತಮಿಳರನ್ನು ನಿಕೃಷ್ಟವಾಗಿ ರಾಜಪಕ್ಸೆ ನಡೆಸಿಕೊಂಡಿದ್ದಾರೆ ಎಂಬ ಆರೋಪ ಹೊತ್ತಿದ್ದಾರೆ. ಶ್ರೀಲಂಕಾ ಭೇಟಿ ಬಗ್ಗೆ ಟ್ವೀಟ್ ಮಾಡಿದ್ದ ಸಲ್ಮಾನ್ ಖಾನ್, ರಾಜಪಕ್ಸೆ ಪರ ಪ್ರಚಾರ ಮಾಡಿದ್ದರ ಬಗ್ಗೆ ಏನು ಹೇಳಿರಲಿಲ್ಲ ಎಂಬುದು ಗಮನಾರ್ಹ.
4/4 : its worth a visit . i'm surely going back for more .
— Salman Khan (@BeingSalmanKhan) December 31, 2014 ಸಲ್ಮಾನ್ ಖಾನ್ ಅಲ್ಲದೆ ಬಿಜೆಪಿ ಸಾಮಾಜಿಕ ಮಾಧ್ಯಮಗಳ ತಜ್ಞ ಅರವಿಂದ್ ಗುಪ್ತ ಅವರು ಕೂಡಾ ರಾಜಪಕ್ಸೆ ಜನಪ್ರಿಯತೆ ಹೆಚ್ಚಿಸಲು ನೆರವಾಗುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಜ.8 ರಂದು ಚುನಾವಣೆ ನಡೆಯಲಿದೆ.
ರಾಜಪಕ್ಸೆ ಅವರ ಮಗ ನಮಲ್ ರಾಜಪಕ್ಸೆ ಹಾಗೂ ನೆಚ್ಚಿನ ನಟಿ ಜಾಕ್ವಲೀನ್ ಫರ್ನಾಂಡೀಸ್ ಅವರ ಕೋರಿಕೆಯ ಮೇರೆಗೆ ಸಲ್ಮಾನ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು.(ಪಿಟಿಐ)
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications