ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾನಾ ಪಾಟೇಕರ್, ಗಣೇಶ್ ವಿರುದ್ಧ ದೂರು ನೀಡಿದ ತನುಶ್ರೀ ದತ್ತಾ

|
Google Oneindia Kannada News

ಮುಂಬೈ, ಅಕ್ಟೋಬರ್ 07: ಬಾಲಿವುಡ್ ನಟಿ ತನುಶ್ರೀ ದತ್ತಾ ಅವರು ಕೊನೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟ ನಾನಾ ಪಾಟೇಕರ್, ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರೆಸಿದ್ದಾರೆ.

2008ರಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಬಾಲಿವುಡ್​ ನಟಿ ತನುಶ್ರೀ ದತ್ತಾ ಮಾಡಿರುವ ಆರೋಪವನ್ನು ಹಿರಿಯ ನಟ, ನಿರ್ಮಾಪಕ ನಾನಾ ಪಾಟೇಕರ್ ಅವರು ನಿರಾಕರಿಸಿದ್ದಾರೆ.

ನಾನಾ ಪಾಟೇಕರ್ ಬಗ್ಗೆ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ ತನುಶ್ರೀ ದತ್ತಾ.!

ನಾನಾ ಪಾಟೇಕರ್ ಅವರ ವಕೀಲರು ಈಗಾಗಲೇ ತನುಶ್ರೀ ದತ್ತಾಗೆ ಲೀಗಲ್​ ನೋಟಿಸ್​ ಕಳುಹಿಸಿದ್ದಾರೆ. ಅಕ್ಟೋಬರ್ 08ರಂದು ಸುದ್ದಿಗೋಷ್ಠಿ ನಡೆಸಿ ಪಾಟೇಕರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

Tanushree Dutta files police complaint against Nana Patekar, Ganesh Acharya

ತನುಶ್ರೀ ದತ್ತಾ ಆರೋಪಕ್ಕೆ ನಾನಾ ಪಾಟೇಕರ್ ಕೊಟ್ಟ ಸ್ಪಷ್ಟನೆ ಏನು.?

ಎಫ್ಐಆರ್ ಹಾಕಿಲ್ಲ: ತನುಶ್ರೀ ದತ್ತಾ ಅವರು ಓಶಿವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾನಾ ಪಾಟೇಕರ್ ಹಾಗೂ ಗಣೇಶ್ ಆಚಾರ್ಯ ವಿರುದ್ಧ ಆರೋಪ ಹೊರೆಸಲಾಗಿದೆ. ಆದರೆ, ಇನ್ನೂ ಎಫ್ಐಆರ್ ಹಾಕಿಲ್ಲ ಎಂದು ಮುಂಬೈ ಪಶ್ಚಿಮ ವಲಯದ ಎಸಿಪಿ ಮನೋಜ್ ಕುಮಾರ್ ಶರ್ಮ ಹೇಳಿದ್ದಾರೆ.

English summary
Bollywood actor Tanushree Dutta on Saturday filed a complaint at Mumbai's Oshiwara police station against actor Nana Patekar and choreographer and film director Ganesh Acharya in connection with a 2008 movie set incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X