ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮಹಾರಾಷ್ಟ್ರ; ತೆರಿಗೆ ಇಲಾಖೆಯಿಂದ 390 ಕೋಟಿ ಆಸ್ತಿ ಜಪ್ತಿ

|
Google Oneindia Kannada News

ಮುಂಬೈ, ಆಗಸ್ಟ್ 11: ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜಲ್ನಾದ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ದಾಳಿಯಲ್ಲಿ ಇಲಾಖೆಯು ಸುಮಾರು 390 ಕೋಟಿ ರೂಪಾಯಿ ಬೇನಾಮಿ ಆಸ್ತಿ ಅಥವಾ ಲೆಕ್ಕ ರಹಿತ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳಲ್ಲಿ 56 ಕೋಟಿ ರೂಪಾಯಿ ನಗದು ಮತ್ತು 14 ಕೋಟಿ ರೂಪಾಯಿ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ.

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಸ್ಥಳಗಳಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ತೆರಿಗೆ ಇಲಾಖೆ ದಾಳಿಗಳನ್ನು ನಡೆಸಿತ್ತು.

ಈ ವ್ಯಾಪಾರ ಗುಂಪುಗಳ ಮೇಲೆ ನಡೆದ ದಾಳಿ ವೇಳೆ ವಶಪಡಿಸಿಕೊಂಡ ಹಣವನ್ನು ನಿಖರವಾಗಿ ಲೆಕ್ಕ ಹಾಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸುಮಾರು 13 ಗಂಟೆ ಬೇಕಾಯಿತು ಎಂದು ಹೇಳಿದ್ದಾರೆ.

ಈ ವ್ಯಾಪಾರ ಗುಂಪುಗಳಿಂದ ಆಪಾದಿತ ತೆರಿಗೆ ವಂಚನೆಯ ಬಗ್ಗೆ ನಿಖರ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು.

Tax Department seized Around ₹ 390 crore assets in Maharashtra

ಈ ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Recommended Video

ಇವರೇನಾ ಪ್ರವೀಣ್ ಗೆ ಹತ್ಯೆ ಮಾಡಿದ ಆ 3 ಕೊಲೆಗಡುಕರು | *Karnataka | OneIndia Kannada

ಇನ್ನೊಂದು ಪ್ರಕರಣದಲ್ಲಿ ಅಬಕಾರಿ ತಂಡವು ಆಗಸ್ಟ್ 9 ರ ರಾತ್ರಿ ಗಾಂಜಾ ಕಳ್ಳಸಾಗಣಿಕೆ ಪರಿಶೀಲನೆ ವೇಳೆ ಗಂಜಾಂ ಜಿಲ್ಲೆಯ ಲಾಂಜಿಪಲ್ಲಿಯಲ್ಲಿ ಮಹಾರಾಷ್ಟ್ರ ಮೂಲದ ಉದ್ಯಮಿಯಿಂದ 1.22 ಕೋಟಿ ರೂಪಾಯಿ ನಗದು ಮತ್ತು ಸುಮಾರು 20 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಂಡಿದೆ.

English summary
Income Tax Department seized Around ₹ 390 crore assets in Maharashtra's Jalna over tax evasion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X