ಮಹಾರಾಷ್ಟ್ರ; ಮಂಗಳವಾರವೇ ಏಕನಾಥ್ ಶಿಂಧೆ ಸಂಪುಟ ವಿಸ್ತರಣೆ?

ಮುಂಬೈ, ಆಗಸ್ಟ್‌.8: ಮಹಾರಾಷ್ಟ್ರದ ಸಚಿವ ಸಂಪುಟ ವಿಸ್ತರಣೆ ಮಂಗಳವಾರವೇ ನಡೆಯಲಿದೆ. ರಾಜಭವನದಲ್ಲಿ ಬೆಳಗ್ಗೆ 11 ಗಂಟೆಗೆ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ವಾರ ಕನಿಷ್ಠ 15 ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಿರ್ಣಾಯಕ ಗೃಹ ಖಾತೆಯನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಬರೀ ಇಬ್ಬರೂ ಮಂತ್ರಿಗಳು ಕ್ಯಾಬಿನೆಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಎನ್‌ಸಿಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಪ್ರತಿಪಕ್ಷ ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿದ್ದಾರೆ.

There is a possibility of cabinet expansion of Maharashtra government. Eknath Shinde lead government may get new ministers. ಮಹಾರಾಷ್ಟ್ರದ ರಾಜಭವನದಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಅಜಿತ್ ಪವಾರ್ ವಿರೋಧ ಪಕ್ಷದ ನಾಯಕ. ಅವರು ಅಂತಹ ವಿಷಯಗಳನ್ನು ಹೇಳಬೇಕಾಗುತ್ತದೆ. ಅಜಿತ್ ದಾದಾ ಅವರು ಸರ್ಕಾರದಲ್ಲಿದ್ದಾಗ ಮೊದಲ 32 ದಿನಗಳಲ್ಲಿ ಕೇವಲ ಐವರು ಮಂತ್ರಿಗಳಿದ್ದರು ಎಂಬುದನ್ನು ಆಗಲೇ ಮರೆತುಬಿಟ್ಟಿದ್ದಾರೆ ಎಂದು ಫಡ್ನವೀಸ್ ವ್ಯಂಗ್ಯವಾಡಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳು ಸತತ ಗೆಲುವು ಕಾಣುತ್ತಿರುವ 16 ಸಂಸದೀಯ ಕ್ಷೇತ್ರಗಳನ್ನು ಗುರುತಿಸುವ ಮೂಲಕ ಬಿಜೆಪಿ ತನ್ನ ಹೆಜ್ಜೆಗುರುತನ್ನು ಸುಧಾರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಆಗಸ್ಟ್ 6 ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಅರೆ ನ್ಯಾಯಾಂಗ ವಿಷಯಗಳನ್ನು ಹೊರತುಪಡಿಸಿ ಕಾರ್ಯದರ್ಶಿಗಳಿಗೆ ಯಾವುದೇ ಸಚಿವ ಮಟ್ಟದ ಅಧಿಕಾರವನ್ನು ನೀಡಲಾಗಿಲ್ಲ ಎಂದು ಹೇಳಿದ್ದರು. ಮುಖ್ಯಮಂತ್ರಿ ಕೇವಲ ಇಬ್ಬರು ಸದಸ್ಯರ ಸಂಪುಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಅಧಿಕಾರಶಾಹಿಗಳಿಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ನೀಡಿದ್ದಾರೆ ಎಂದು ರಾಜ್ಯದ ಪ್ರತಿಪಕ್ಷಗಳು ಆರೋಪಿಸಿದ್ದವು. ಇವು ಈಗ ಶಿಂಧೆ ತಂಡಕ್ಕೆ ಸೇರ್ಪಡೆಗೊಂಡಿರುವ ಶಿವಸೇನೆ ನಾಯಕರ ಹಿಡಿತದಲ್ಲಿವೆ ಎಂದು ಅವರು ಹೇಳಿದರು.

There is a possibility of cabinet expansion of Maharashtra government. Eknath Shinde lead government may get new ministers. ಮಹಾರಾಷ್ಟ್ರದ ರಾಜಭವನದಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಜೂನ್ 30 ರಂದು ಶಿವಸೇನೆಯ ಬಂಡಾಯಗಾರ ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮತ್ತು ದೇವೇಂದ್ರ ಫಡ್ನವಿಸ್ ಅವರ ಉಪನಾಯಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ನಂತರ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರದ ಚುಕ್ಕಾಣಿ ಹಿಡಿಯಲು ಕೋರಿದ್ದರು.

ಜೂನ್ 28 ರಂದು ದೇವೇಂದ್ರ ಫಡ್ನವೀಸ್ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಬಹುಮತ ಸಾಬೀತುಪಡಿಸುವಂತೆ ಕೇಳಿಕೊಂಡರು. ಮರುದಿನ, ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+