ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಕ್ಕಿ ಹರಿದ ತಿವಾರೆ ಜಲಾಶಯ, ಆರು ಸಾವು, 24 ಮಂದಿ ನಾಪತ್ತೆ

|
Google Oneindia Kannada News

ಮುಂಬೈ, ಜುಲೈ 3: ಮಹಾರಾಷ್ಟ್ರದಲ್ಲಿ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ತಿವಾರೆ ಜಲಾಶಯ ಉಕ್ಕಿ ಹರಿದು ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಇನ್ನೂ 22-24 ಮಂದಿ ನಾಪತ್ತೆಯಾಗಿದ್ದು, ತೀವ್ರ ಶೋಧ ನಡೆಯುತ್ತಿದೆ. ಜಲಾಶಯದ ಸುತ್ತಮುತ್ತಲಿನ ಮನೆಗಳು ಕೊಚ್ಚಿ ಹೋಗಿವೆ. ಜಲಾಶಯ ಆಸು ಪಾಸಿರುವ 7 ಹಳ್ಳಿಗಳಿಗೆ ಪ್ರವಾಹ ಸ್ಥಿತಿ ಎದುರಾಗಿದೆ.

Tiware dam was breached causing flood like situation

ಮಹಾರಾಷ್ಟ್ರದ ರತ್ನಗಿರಿ ಸಮೀಪವಿರುವ ತಿವಾರೆ ಜಲಾಶಯ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತುಂಬಿ ಹೋಗಿದೆ. ಅದರಿಂದ ನೀರು ಉಕ್ಕಿದ್ದು ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ.

ಅಲ್ಲಿರುವ 12 ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಕುಸಿದು ಬಿದ್ದಿವೆ, ಹಲವು ಮಂದಿಯನ್ನು ಸುರಕ್ಷಿತ ಜಾಗಗಳಿಗೆ ರವಾನಿಸಲಾಗಿದೆ. ಇನ್ನೂ 24 ಮಂದಿ ಕಾಣೆಯಾಗಿದ್ದು ಅವರ ಹುಡುಕಾಟ ನಡೆಯುತ್ತಿದೆ. ಒಟ್ಟು 7 ಹಳ್ಳಿಗಳಿಗೆ ನೀರು ನುಗ್ಗುವ ಭೀತಿ ಇದ್ದು ಅಲ್ಲಿದ್ದವರನ್ನು ಬೇರೆಡೆಗೆ ಕೊಂಡೊಯ್ಯುವ ಕಾರ್ಯ ನಡೆಯುತ್ತಿದೆ.

ಮಂಗಳವಾರ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿತ್ತು. ಬುಧವಾರ ಕೂಡ ತೀವ್ರ ಮಳೆ ಮುಂದುವರೆದಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ. ಇನ್ನೂ ಎರಡು ದಿನ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇ

English summary
Tiware dam in Ratnagiri of Maharashtra was breached causing flood like situation in 7 downstream villages.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X