Breaking: ಮಹಾರಾಷ್ಟ್ರದಲ್ಲಿ ಗೂಡ್ಸ್ ಮತ್ತು ಪ್ಯಾಸೆಂಜರ್ ರೈಲು ಡಿಕ್ಕಿ
ಮುಂಬೈ, ಆಗಸ್ಟ್ 17: ಮಹಾರಾಷ್ಟ್ರದ ಗೊಂಡಿಯಾದಲ್ಲಿ ರೈಲು ಅಪಘಾತ ನಡೆದಿದೆ. ಗೂಡ್ಸ್ ಮತ್ತು ಪ್ಯಾಸೆಂಜರ್ ರೈಲುಗಳು ಡಿಕ್ಕಿಯಾಗಿದ್ದು, 50 ಮಂದಿ ಗಾಯಗೊಂಡಿದ್ದಾರೆ.
ಬುಧವಾರ ಮುಂಜಾನೆ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮೂರು ಬೋಗಿಗಳು ಹಳಿತಪ್ಪಿವೆ.
ಎರಡು ರೈಲುಗಳಿಗೆ ಸರಿಯಾಗಿ ಸಿಗ್ನಲ್ ಸಿಗದಿರುವುದು ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ಪ್ಯಾಸೆಂಜರ್ ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ತೆರಳುತ್ತಿತ್ತು. ಆದರೆ ರೈಲು ನಿಲ್ದಾಣದಲ್ಲಿ ಸಿಗ್ನಲ್ ಸಮಸ್ಯೆಯಿಂದ ಈ ಘಟನೆ ನಡೆದಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಗಿದೆ.

ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿ ಬರಬೇಕಿದೆ.












Click it and Unblock the Notifications