ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಶಿವಸೇನೆ ಬಂಡಾಯ ಶಾಸಕರು ತಂಗಿರುವ ಹೋಟೆಲ್ ಬಳಿ ಟಿಎಂಸಿ ಪ್ರತಿಭಟನೆ

|
Google Oneindia Kannada News

ಗುವಾಹಟಿ, ಜೂನ್ 23: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಶಾಸಕರು ತಂಗಿರುವ ಗುವಾಹಟಿ ಹೋಟೆಲ್ ಎದುರು ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಅಸ್ಸಾಂನ ಟಿಎಂಸಿ ಮುಖ್ಯಸ್ಥ ರಿಪುನ್ ಬೋರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಭಾರತೀಯ ಜನತಾ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಟಿಎಂಸಿ ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.

 Explained: ಮಹಾರಾಷ್ಟ್ರದಲ್ಲಿ ಆ 40 ಶಾಸಕರ ಸಹಿ ಸರ್ಕಾರಕ್ಕೆ ಆಗುತ್ತಾ ಕಹಿ!? Explained: ಮಹಾರಾಷ್ಟ್ರದಲ್ಲಿ ಆ 40 ಶಾಸಕರ ಸಹಿ ಸರ್ಕಾರಕ್ಕೆ ಆಗುತ್ತಾ ಕಹಿ!?

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರವನ್ನು ಉರುಳಿಸಲು ಅಸ್ಸಾಂನ ಆಡಳಿತಾರೂಢ ಬಿಜೆಪಿ ಸರ್ಕಾರವು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಶಿವಸೇನೆಯ ಬಂಡಾಯ ಶಾಸಕರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಬಳಿ ಪ್ರತಿಭಟನೆ

ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಬಳಿ ಪ್ರತಿಭಟನೆ

ಕಳೆದ ಎರಡು ದಿನಗಳಿಂದ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಶಿವಸೇನೆ ಬಂಡಾಯ ಶಾಸಕರು ತಂಗಿದ್ದಾರೆ. ಗುರುವಾರ ಬೆಳಗ್ಗೆ ಇದೇ ಹೋಟೆಲ್ ಬಳಿಗೆ ಧಾವಿಸಿ ಬಂದ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶಿವಸೇನೆ ಶಾಸಕರ ದಂಗೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಮ್ಮಿಶ್ರ ಸರ್ಕಾರಕ್ಕೆ ಉರುಳಾಗುವ ಶಾಸಕರ ಪ್ರಯತ್ನದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು.

ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ಟಿಎಂಸಿ ಆಕ್ರೋಶ

ಅಸ್ಸಾಂನ ಬಿಜೆಪಿ ಸರ್ಕಾರದ ವಿರುದ್ಧ ಟಿಎಂಸಿ ಆಕ್ರೋಶ

ಅಸ್ಸಾಂನಲ್ಲಿ ಸುರಿದ ಭಾರೀ ಮಳೆಯಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ರಾಜ್ಯದಲ್ಲಿ ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಕಳೆದ ಮೇ ತಿಂಗಳಿನಿಂದ ಇದುವರೆಗೂ 55 ಲಕ್ಷಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದು, 89 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಬಗ್ಗೆ ಗಮನಹರಿಸದ ರಾಜ್ಯ ಸರ್ಕಾರವು ಮಹಾರಾಷ್ಟ್ರದ ಬಂಡಾಯ ಶಾಸಕರನ್ನು ಕರೆತಂದು ಸಾಕಿ ಸಲಹುವ ಕೆಲಸ ಮಾಡುತ್ತಿದೆ ಎಂದು ಟಿಎಂಸಿ ದೂಷಿಸಿದೆ.

ಅನರ್ಹತೆಯಿಲ್ಲದೇ ಪಕ್ಷ ವಿಭಜನೆಗೆ ಲೆಕ್ಕಾಚಾರ

ಅನರ್ಹತೆಯಿಲ್ಲದೇ ಪಕ್ಷ ವಿಭಜನೆಗೆ ಲೆಕ್ಕಾಚಾರ

ಶಿವಸೇನೆಯ ಇನ್ನೂ ಮೂವರು ಶಾಸಕರು ಮುಂಬೈ ಕಡೆಗೆ ಪ್ರಯಾಣ ಬೆಳೆಸಿದ್ದು, ಏಕನಾಥ್ ಶಿಂಧೆ ಪರವಾಗಿ ನಿಂತ ಶಾಸಕರ ಸಂಖ್ಯೆಯು 36ಕ್ಕೆ ಏರಿಕೆ ಆಗಿದೆ. ಪಕ್ಷದ ಒಟ್ಟು 55 ಶಾಸಕರಲ್ಲಿ 36 ಶಾಸಕರ ಬೆಂಬಲವನ್ನು ಶಿಂಧೆ ಹೊಂದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಮಣಿಸುವುದಕ್ಕೆ ಇನ್ನೊಂದು ಸ್ಥಾನವಷ್ಟೇ ಬಾಕಿ ಉಳಿದಿದೆ. ಅನರ್ಹತೆಯ ಶಿಕ್ಷೆ ಇಲ್ಲದೇ ಪಕ್ಷ ವಿಭಜನೆಗೆ ಮೂರರ ಎರಡರಷ್ಟು ಬೆಂಬಲವನ್ನು ಹೊಂದಿರಬೇಕಿದೆ. ಆ ಲೆಕ್ಕದಲ್ಲಿ 37 ಶಾಸಕರ ಬೆಂಬಲಕ್ಕೆ ಇನ್ನೊಂದು ಸ್ಥಾನವಷ್ಟೇ ಬಾಕಿ ಉಳಿದಿದೆ.

ಮಹಾರಾಷ್ಟ್ರ ಸರ್ಕಾರದಲ್ಲಿ ಶಾಸಕರ ಅಂಕಿ-ಸಂಖ್ಯೆ

ಮಹಾರಾಷ್ಟ್ರ ಸರ್ಕಾರದಲ್ಲಿ ಶಾಸಕರ ಅಂಕಿ-ಸಂಖ್ಯೆ

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಒಬ್ಬ ಶಾಸಕರು ವಿಧಿವಶವಾದ ಹಿನ್ನೆಲೆ ಈ ಸಂಖ್ಯೆಯು 287ಕ್ಕೆ ತಗ್ಗಿದೆ. ಹೀಗಾಗಿ ಸರ್ಕಾರದ ಬಹುಮತಕ್ಕೆ ಕನಿಷ್ಠ 144 ಸ್ಥಾನಗಳು ಬೇಕಾಗುತ್ತದೆ. ಬಿಜೆಪಿಯು 106 ಶಾಸಕರನ್ನು ಹೊಂದುವ ಮೂಲಕ ಅತಿದೊಡ್ಡ ಪಕ್ಷವಾಗಿದೆ. ಆದರೆ 55 ಶಾಸಕರನ್ನು ಹೊಂದಿರುವ ಶಿವಸೇನೆ, 53 ಶಾಸಕರನ್ನು ಹೊಂದಿರುವ ಎನ್ ಸಿಪಿ ಮತ್ತು 44 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಜೊತೆ ಮೂವರು ಶಾಸಕರನ್ನು ಹೊಂದಿರುವ ಬಹುಜನ ವಿಕಾಸ ಅಘಾಡಿ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಮಹಾ ವಿಕಾಸ ಅಘಾಡಿ ಎಂದ ಸಮ್ಮಿಶ್ರ ಸರ್ಕಾರವನ್ನು ರಚಿಸಿವೆ.

ಮಹಾ ವಿಕಾಸ ಅಘಾಡಿ ಒಕ್ಕೂಟವು 169 ಶಾಸಕರ ಬೆಂಬಲವನ್ನು ಹೊಂದಿದೆ. ಇನ್ನೊಂದು ಮಗ್ಗಲಿನಲ್ಲಿ ಬಿಜೆಪಿಯು 106 ಸ್ಥಾನಗಳ ಜೊತೆಗೆ ಮಿತ್ರಪಕ್ಷಗಳು ಹಾಗೂ ಐದು ಇತರೆ ಶಾಸಕರು ಸೇರಿದಂತೆ ಒಟ್ಟು 113 ಶಾಸಕರ ಬೆಂಬಲವನ್ನು ಹೊಂದಿದೆ.

English summary
Maharashtra Political Crisis: Trinamool Congress staged a massive protest outside Guwahati Hotel. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X