ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಆರ್‌ಪಿ ಹಗರಣ: ಬಾರ್ಕ್ ಮಾಜಿ CEO ಪಾರ್ಥೋ ದಾಸ್ ಗುಪ್ತಾರಿಗೆ ಜಾಮೀನು

|
Google Oneindia Kannada News

ಮುಂಬೈ, ಮಾರ್ಚ್.02: ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬ್ರಾಡ್ ಕಾಸ್ಟ್‌ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರಿಗೆ ಮಂಗಳವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿಡಿ ನಾಯಕ್ ಅವರು, 2 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಇಬ್ಬರು ಶ್ಯೂರಿಟಿಗಳನ್ನು ಆಧಾರವಾಗಿ ಇಟ್ಟುಕೊಂಡು ಪಾರ್ಥೋ ದಾಸ್ ಗುಪ್ತಾರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ರಿಪಬ್ಲಿಕ್ ಟಿ.ವಿ ಸಿಇಒ ವಿಕಾಸ್ ಖಾಂಚಂದಾನಿಗೆ ಜಾಮೀನುರಿಪಬ್ಲಿಕ್ ಟಿ.ವಿ ಸಿಇಒ ವಿಕಾಸ್ ಖಾಂಚಂದಾನಿಗೆ ಜಾಮೀನು

ಕಳೆದ ಜನವರಿಯಲ್ಲಿ ಬಾಂಬೆ ಸೆಷನ್ಸ್ ಕೋರ್ಟ್ ಜಾಮೀನು ನೀಡುವುದಕ್ಕೆ ನಿರಾಕರಿಸಿದ ಹಿನ್ನೆಲೆ ಪಾರ್ಥೋ ದಾಸ್ ಗುಪ್ತಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಎರಡು ವಾರಗಳ ಹಿದೆ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಫೆಬ್ರವರಿ.02ರಂದು ತೀರ್ಪು ನೀಡುವುದಾಗಿ ಹೇಳಿತ್ತು. ಅದರಂತೆ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

TRP Scam: Former BARC CEO Partho Dasgupta Gets Bail From Bombay High Court

ಡಿಸೆಂಬರ್.24ರಂದು ಬಂಧನ:

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಬ್ರಾಡ್ ಕಾಸ್ಟ್‌ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರನ್ನು ಕಳೆದ ಡಿಸೆಂಬರ್ 24ರಂದು ಮುಂಬೈ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ಎಅರ್‌ಜಿ ಔಟ್ ಲೇಯರ್ ಮೀಡಿಯಾಗೆ ಸೇರಿದ ರಿಪಬ್ಲಿಕ್ ಟಿವಿ ಮತ್ತು ರಿಪಬ್ಲಿಕ್ ಭಾರತ್ ವಾಹಿನಿಗಳ ಟಿಆರ್ ಪಿಯನ್ನು ಅಕ್ರಮವಾಗಿ ಹೆಚ್ಚಿಸುವುದಕ್ಕಾಗಿ ಸುದ್ದಿ ವಾಹಿನಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಂದ ಅಕ್ರಮವಾಗಿ ಹಣ ಪಡೆದುಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೇ, ಸರ್ಕಾರಿ ಹುದ್ದೆ ದುರುಪಯೋಗ ಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಪಾರ್ಷೋ ದಾಸ್ ಗುಪ್ತಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
TRP Scam: Former BARC CEO Partho Dasgupta Gets Bail From Bombay High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X