ಮಹಾರಾಷ್ಟ್ರದಲ್ಲಿ ಅಧಿಕಾರದ ರಿಮೋಟ್ ಕಂಟ್ರೋಲ್ ಉದ್ಧವ್ ಠಾಕ್ರೆ ಕೈಲಿದೆ!

ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರದಲ್ಲಿ ಅಧಿಕಾರದ ರಿಮೋಟ್ ಕಂಟ್ರೋಲ್ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಕೈಲಿದೆ ಎಂದು ಶಿವಸೇನಾ ಹೇಳಿದೆ.

2014ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ 2019ರಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿದೆ. 1995 ರಿಂದ 1999ರ ಸೇನಾ- ಬಿಜೆಪಿ ಸರ್ಕಾರದ ಮೇಲೆ ಸೇನಾದ ಬಾಳಾ ಠಾಕ್ರೆ ಹೇಗೆ ಹಿಡಿತ ಹೊಂದಿದ್ದರೋ ಅದೇ ರೀತಿ ಈ ಬಾರಿಯೂ ಹಿಡಿತ ಸಿಕ್ಕಿದೆ ಎಂದು ಘೋಷಿಸಿಕೊಂಡಿದೆ. 2014ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ 122 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 105 ಸ್ಥಾನ ಗಳಿಸಿದೆ. 288 ವಿಧಾನಸಭಾ ಸ್ಥಾನಗಳುಳ್ಳ ಮಹಾರಾಷ್ಟ್ರದಲ್ಲಿ ಅಧಿಕಾರ ಸ್ಥಾಪಿಸಲು 146 ಸ್ಥಾನಗಳು ಅವಶ್ಯ. ಸೇನಾ ಕೂಡಾ 2014ರಲ್ಲಿ 63 ಸ್ಥಾನ ಗೆದ್ದಿತ್ತು. ಈ ಬಾರಿ 56 ಸ್ಥಾನ ಗೆದ್ದಿದೆ.

 Uddhav now has remote control of power in Maharashtra, says Shiv Sena

ಚುನಾವಣಾ ಪೂರ್ವ ಮೈತ್ರಿಯ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಶ್ವಾಸನೆ ನೀಡಿದಂತೆ 50:50 ಅನುಪಾತದಲ್ಲಿ ಅಧಿಕಾರ ಹಂಚಿಕೆಯಾಗಬೇಕು. ಅಧಿಕಾರ ಅವಧಿ ಸಮನಾಗಿ ಹಂಚಿಕೆಯಾಗಬೇಕು, ಉನ್ನತ ಸ್ಥಾನಗಳು ಸಿಗಬೇಕು ಎಂದು ಶಿವಸೇನಾ ತನ್ನ ಬೇಡಿಕೆಯನ್ನು ಮುಂದಿಟ್ಟು ಪಟ್ಟು ಹಿಡಿದು ಕುಳಿತಿದೆ.

ಅಚಲ್ ಪುರ್ ಶಾಸಕ, ಪ್ರಹಾರ್ ಜನಶಕ್ತಿ ಪಕ್ಷದ ಮುಖ್ಯಸ್ಥ ಬಚ್ಚು ಕಾಡು ಹಾಗೂ ಮೇಲ್ ಘಾಟ್ ನ ರಾಜ್ ಕುಮಾರ್ ಪಟೇಲ್ ಅವರು ಉದ್ಧವ್ ಠಾಕ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಮಿತ್ರಪಕ್ಷವಾಗಿರುವ ಶಿವಸೇನಾ ಸಮಾನ ಅಧಿಕಾರ ಹಂಚಿಕೆಗೆ ಪಟ್ಟು ಹಿಡಿದಿದೆ.(ಪಿಟಿಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+