ಉದ್ಧವ್ ಠಾಕ್ರೆ ಆರೋಗ್ಯ ಸುಧಾರಿಸುವವರೆಗೂ ಸಿಎಂ ಸ್ಥಾನದಿಂದ ಕೆಳಗಿಳಿಯಲಿ: ಬಿಜೆಪಿ

ಮುಂಬೈ ಡಿಸೆಂಬರ್ 22: ವಿಧಾನಸಭೆ ಅಧಿವೇಶನಕ್ಕೆ ಹಾಜರಾಗದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಬಿಜೆಪಿ ಟೀಕಿಸಿದೆ. ಉದ್ಧವ್ ಠಾಕ್ರೆ ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುವವರೆಗೆ ಅವರ ಮುಖ್ಯಮಂತ್ರಿ ಸ್ಥಾನವನ್ನು ಬೇರೆಯವರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಠಾಕ್ರೆ ಗೈರುಹಾಜರಾಗಿರುವುದು ಅನುಚಿತವಾಗಿದೆ ಎಂದು ಪಾಟೀಲ್ ಹೇಳಿದರು.

"ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗದಿದ್ದರೆ, ಅವರು ಈ ವಿಷಯವನ್ನು ಪರಿಶೀಲಿಸಲು ಯಾರನ್ನಾದರೂ ನೇಮಿಸಬೇಕು. ಮುಖ್ಯಮಂತ್ರಿಗಳು ವಿಧಾನಸಭೆ ಕಲಾಪದಿಂದ ದೂರ ಉಳಿದಿರುವುದು ಸರಿಯಲ್ಲ. ಸಮಾವೇಶಕ್ಕೆ ಮುಖ್ಯಮಂತ್ರಿ ಸಂಪೂರ್ಣ ಗೈರು ಹಾಜರಾಗುವುದನ್ನು ನಾವು ಒಪ್ಪುವುದಿಲ್ಲ,'' ಎಂದು ಪಾಟೀಲ್ ಹರಿಹಾಯ್ದಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಕಾಂಗ್ರೆಸ್ ಮತ್ತು ಎನ್‌ಸಿಪಿಯನ್ನು ನಂಬುವುದಿಲ್ಲ. ಏಕೆಂದರೆ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡರೆ ಅವರು ಬಿಡುವುದಿಲ್ಲ ಎಂದು ಅವರಿಗೆ ತಿಳಿದಿದೆ. ಅನಾರೋಗ್ಯ ಸಂದರ್ಭದಲ್ಲಿ ಅವರು ಬೇರೆಯವರನ್ನು ನೇಮಿಸಬೇಕು. ಇಲ್ಲವಾದಲ್ಲಿ ಅವರು ತಮ್ಮ ಮಗ ಆದಿತ್ಯ ಠಾಕ್ರೆಗೆ ಅಧಿಕಾರ ಹಸ್ತಾಂತರಿಸಬಹುದು ಎಂದು ಪಾಟೀಲ್ ಹೇಳಿದರು. ವಿವಿಧ ಇಲಾಖೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಆಗಿರುವ ಅವ್ಯವಹಾರಗಳನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು. ಇದರಲ್ಲಿ ಹಲವಾರು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ನಿವೃತ್ತ ಅಧಿಕಾರಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಮ್ಮೇಳನದಲ್ಲಿ ಖಂಡಿತಾ ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ. ಎರಡು ವರ್ಷಗಳ ಹಿಂದೆ ನಡೆದ ಪೊಲೀಸ್ ನೇಮಕಾತಿ ಪ್ರಕ್ರಿಯೆ ಕೂಡ ಪರಿಶೀಲನೆಯಲ್ಲಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ ಎಂದು ಪಾಟೀಲ್ ಹೇಳಿದರು.

Uddhav Thackeray absent from assembly: BJP wants CM to step down until illness

ಇದೇ ವೇಳೆ ಬಿಜೆಪಿ ಅಧ್ಯಕ್ಷರ ಆರೋಪವನ್ನು ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಠಾಕ್ರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದರು. ಅವರು ಅಧಿಕಾರದಿಂದ ಕೆಳಗಿಳಿಯುವ ಅಗತ್ಯವಿಲ್ಲ. 61 ವರ್ಷದ ಉದ್ಧವ್ ಠಾಕ್ರೆ ಇತ್ತೀಚೆಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಮೂರು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದರು. ಆದರೆ, ಕಳೆದ ದಿನಗಳ ಹಿಂದೆ ನಡೆದ ಸಂಪುಟ ಸಭೆ ಹಾಗೂ ವಿಧಾನಪರಿಷತ್ ಸದಸ್ಯರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಟೀ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

ಇನ್ನೂ ಕುತ್ತಿಗೆ, ಬೆನ್ನುಮೂಳೆಯೊಂದರ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಈಗ ಚೇತರಿಸಿಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾತ್ರೆ ಅವರ ಯೋಗ ಕ್ಷೇಮವನ್ನು ಪ್ರಧಾನಿ ಮೋದಿ ಅವರು ಇಂದು ವಿಚಾರಿಸಿದ್ದಾರೆ. 61 ವರ್ಷದ ಠಾಕ್ರೆ, ಇದೀಗ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲಿದ್ದಾರೆ ಎಂದು ಶಿವಸೇನಾ ನಾಯಕ ವಿನಾಯಕ್ ರಾವುತ್ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸದನದ ನಾಯಕರು ನಡೆಸುವ ಸಾಂಪ್ರದಾಯಿಕ ಸಭೆಯಲ್ಲಿ ಶಿವಸೇನಾ ಸಂಸದರಿಂದ ನರೇಂದ್ರ ಮೋದಿ ಅವರು, ಠಾಕ್ರೆ ಅವರ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಕೇಳಿದ್ದರು. ಸಭಾಪತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಕೂಡ ಹಾಜರಾಗಿದ್ದರು. ಶಸ್ತ್ರ ಚಿಕಿತ್ಸೆ ಬಳಿಕ ಠಾಕ್ರೆ ಇತ್ತೀಚೆಗೆ ವಿಧಾನ ಭವನಕ್ಕೆ ಭೇಟಿ ನೀಡಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ತಮ್ಮ ಗೃಹ ಕಚೇರಿಯಿಂದಲೇ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

Recommended Video

      ಫ್ಯಾಮಿಲಿ ಪಾಲಿಟಿಕ್ಸ್ ನಲ್ಲಿ ಗಾಂಧಿ ಫ್ಯಾಮಿಲಿಯನ್ನು ಮೀರಿಸುತ್ತಾ ದೊಡ್ಡಗೌಡರ ಕುಟುಂಬ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+