ಮಹಾರಾಷ್ಟ್ರ ಸಿಎಂ, ಡಿಸಿಎಂಗೆ ಉದ್ಧವ್ ಠಾಕ್ರೆ ಟ್ವೀಟ್ ಶುಭಾಶಯ
ಮುಂಬೈ, ಜೂನ್ 30: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ 19ನೇ ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟ್ವೀಟ್ ಮಾಡಿದ ಅವರು "ಮಹಾರಾಷ್ಟ್ರಕ್ಕಾಗಿ ನೀವು ಉತ್ತಮ ಕಾರ್ಯಗಳನ್ನು ಮಾಡುತ್ತೀರಿ ಎಂದು ನಾನು ಭಾವಿಸುತ್ತೇನೆ," ಎಂದು ಬರೆದುಕೊಂಡಿದ್ದಾರೆ.
ಗುರುವಾರ ಸಂಜೆ 7.30ಕ್ಕೆ ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನೂತನ ಸಿಎಂ ಮತ್ತು ಡಿಸಿಎಂಗೆ ಪ್ರಮಾಣವಚನ ಬೋಧಿಸಿದರು. ಮರಾಠಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಬಾಳಾಸಾಹೇಬ್ ಠಾಕ್ರೆ ಅನ್ನು ಸ್ಮರಿಸಿಕೊಂಡರು. ಮಹಾರಾಷ್ಟ್ರದ ಜನತೆ ಮತ್ತು ಶಿವಸೇನೆಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.

ಫೇಸ್‌ಬುಕ್ ಲೈವ್‌ನಲ್ಲಿ ಉದ್ಧವ್ ಠಾಕ್ರೆ ರಾಜೀನಾಮೆ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಜೂನ್ 29ರಂದು ರಾತ್ರೋರಾತ್ರಿ ರಾಜೀನಾಮೆ ಘೋಷಿಸಿದರು. ಗುರುವಾರ ಬಹುಮತ ಸಾಬೀತುಪಡಿಸಬೇಕು ಎಂಬ ಸುಪ್ರೀಂಕೋರ್ಟ್ ಸೂಚನೆ ಬೆನ್ನಲ್ಲೇ ಅವರು ತಮ್ಮ ನಿರ್ಧಾರ ಪ್ರಕಟಿಸಿದ್ದರು.
ಮುಖ್ಯಮಂತ್ರಿ ಸ್ಥಾನದ ಜೊತೆಗೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ಉದ್ಧವ್ ಠಾಕ್ರೆ ರಾಜೀನಾಮೆಯನ್ನು ಘೋಷಿಸಿದರು. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಎರಡು ವರ್ಷಗಳ ತಮ್ಮ ಆಡಳಿತವು ತೃಪ್ತಿ ತಂದಿದೆ ಎಂದರು. ಶರದ್ ಪವಾರ್ ಮತ್ತು ಸೋನಿಯಾ ಗಾಂಧಿಗೆ ಧನ್ಯವಾದ ತಿಳಿಸಿದ್ದರು.
ಭಾವನಾತ್ಮಕ ಮಾತುಗಳನ್ನು ಆಡಿದ್ದ ಉದ್ಧವ್ ಠಾಕ್ರೆ: "ನಾನು ಅನಿರೀಕ್ಷಿತ ರೀತಿಯಲ್ಲಿ ಅಧಿಕಾರಕ್ಕೆ ಬಂದಿದ್ದೇನೆ ಮತ್ತು ನಾನು ಅದೇ ರೀತಿಯಲ್ಲಿ ಹೊರ ನಡೆಯುತ್ತಿದ್ದೇನೆ. ನಾನು ಶಾಶ್ವತವಾಗಿ ಹೋಗುವುದಿಲ್ಲ, ನಾನು ಇಲ್ಲೇ ಇರುತ್ತೇನೆ ಮತ್ತು ಮತ್ತೊಮ್ಮೆ ಶಿವಸೇನಾ ಭವನದಲ್ಲಿ ಕುಳಿತುಕೊಳ್ಳುತ್ತೇನೆ. ನನ್ನ ಎಲ್ಲಾ ಜನರನ್ನು ನಾನು ಒಟ್ಟುಗೂಡಿಸುತ್ತೇನೆ. ನಾನು ಸಿಎಂ ಮತ್ತು ಎಂಎಲ್‌ಸಿ ಸ್ಥಾನಕ್ಕೆ ಈಗ ರಾಜೀನಾಮೆ ನೀಡುತ್ತಿದ್ದೇನೆ," ಎಂದು ಉದ್ಧವ್ ಠಾಕ್ರೆ ತಮ್ಮ ಭಾವನಾತ್ಮಕ ಭಾಷಣದಲ್ಲಿ ಹೇಳಿಕೊಂಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications