ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಸಿಎಂ, ಡಿಸಿಎಂಗೆ ಉದ್ಧವ್ ಠಾಕ್ರೆ ಟ್ವೀಟ್ ಶುಭಾಶಯ

|
Google Oneindia Kannada News

ಮುಂಬೈ, ಜೂನ್ 30: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದ 19ನೇ ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟ್ವೀಟ್ ಮಾಡಿದ ಅವರು "ಮಹಾರಾಷ್ಟ್ರಕ್ಕಾಗಿ ನೀವು ಉತ್ತಮ ಕಾರ್ಯಗಳನ್ನು ಮಾಡುತ್ತೀರಿ ಎಂದು ನಾನು ಭಾವಿಸುತ್ತೇನೆ," ಎಂದು ಬರೆದುಕೊಂಡಿದ್ದಾರೆ.

Timeline: ಮಹಾ ವಿಕಾಸ ಅಘಾಡಿ ಸರ್ಕಾರದ ಅಂದಿನ ಹುಟ್ಟಿನಿಂದ ಇಂದಿನ ಪತನದವರೆಗೆ! Timeline: ಮಹಾ ವಿಕಾಸ ಅಘಾಡಿ ಸರ್ಕಾರದ ಅಂದಿನ ಹುಟ್ಟಿನಿಂದ ಇಂದಿನ ಪತನದವರೆಗೆ!

ಗುರುವಾರ ಸಂಜೆ 7.30ಕ್ಕೆ ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನೂತನ ಸಿಎಂ ಮತ್ತು ಡಿಸಿಎಂಗೆ ಪ್ರಮಾಣವಚನ ಬೋಧಿಸಿದರು. ಮರಾಠಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಬಾಳಾಸಾಹೇಬ್ ಠಾಕ್ರೆ ಅನ್ನು ಸ್ಮರಿಸಿಕೊಂಡರು. ಮಹಾರಾಷ್ಟ್ರದ ಜನತೆ ಮತ್ತು ಶಿವಸೇನೆಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.

Uddhav Thackeray Congratulates Maharashtra New CM Eknath Shinde and DCM Devendra Fadnavis

ಫೇಸ್‌ಬುಕ್ ಲೈವ್‌ನಲ್ಲಿ ಉದ್ಧವ್ ಠಾಕ್ರೆ ರಾಜೀನಾಮೆ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಜೂನ್ 29ರಂದು ರಾತ್ರೋರಾತ್ರಿ ರಾಜೀನಾಮೆ ಘೋಷಿಸಿದರು. ಗುರುವಾರ ಬಹುಮತ ಸಾಬೀತುಪಡಿಸಬೇಕು ಎಂಬ ಸುಪ್ರೀಂಕೋರ್ಟ್ ಸೂಚನೆ ಬೆನ್ನಲ್ಲೇ ಅವರು ತಮ್ಮ ನಿರ್ಧಾರ ಪ್ರಕಟಿಸಿದ್ದರು.

ಮುಖ್ಯಮಂತ್ರಿ ಸ್ಥಾನದ ಜೊತೆಗೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ಉದ್ಧವ್ ಠಾಕ್ರೆ ರಾಜೀನಾಮೆಯನ್ನು ಘೋಷಿಸಿದರು. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಎರಡು ವರ್ಷಗಳ ತಮ್ಮ ಆಡಳಿತವು ತೃಪ್ತಿ ತಂದಿದೆ ಎಂದರು. ಶರದ್ ಪವಾರ್ ಮತ್ತು ಸೋನಿಯಾ ಗಾಂಧಿಗೆ ಧನ್ಯವಾದ ತಿಳಿಸಿದ್ದರು.

ಭಾವನಾತ್ಮಕ ಮಾತುಗಳನ್ನು ಆಡಿದ್ದ ಉದ್ಧವ್ ಠಾಕ್ರೆ: "ನಾನು ಅನಿರೀಕ್ಷಿತ ರೀತಿಯಲ್ಲಿ ಅಧಿಕಾರಕ್ಕೆ ಬಂದಿದ್ದೇನೆ ಮತ್ತು ನಾನು ಅದೇ ರೀತಿಯಲ್ಲಿ ಹೊರ ನಡೆಯುತ್ತಿದ್ದೇನೆ. ನಾನು ಶಾಶ್ವತವಾಗಿ ಹೋಗುವುದಿಲ್ಲ, ನಾನು ಇಲ್ಲೇ ಇರುತ್ತೇನೆ ಮತ್ತು ಮತ್ತೊಮ್ಮೆ ಶಿವಸೇನಾ ಭವನದಲ್ಲಿ ಕುಳಿತುಕೊಳ್ಳುತ್ತೇನೆ. ನನ್ನ ಎಲ್ಲಾ ಜನರನ್ನು ನಾನು ಒಟ್ಟುಗೂಡಿಸುತ್ತೇನೆ. ನಾನು ಸಿಎಂ ಮತ್ತು ಎಂಎಲ್‌ಸಿ ಸ್ಥಾನಕ್ಕೆ ಈಗ ರಾಜೀನಾಮೆ ನೀಡುತ್ತಿದ್ದೇನೆ," ಎಂದು ಉದ್ಧವ್ ಠಾಕ್ರೆ ತಮ್ಮ ಭಾವನಾತ್ಮಕ ಭಾಷಣದಲ್ಲಿ ಹೇಳಿಕೊಂಡಿದ್ದರು.

English summary
Uddhav Thackeray Congratulates Maharashtra New CM Eknath Shinde and DCM Devendra Fadnavis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X