ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ವಿಧಾನಸಭಾ ಚುನಾವಣೆ ಕಣಕ್ಕೆ ಶಿವಸೇನೆ ಕಲಿಗಳು?

|
Google Oneindia Kannada News

ಮುಂಬೈ, ಸಪ್ಟೆಂಬರ್.25: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೇ ಬೇಡವೇ ಎನ್ನುವ ಬಗ್ಗೆ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಮಿಕ ಕಾಯ್ದೆ ಮತ್ತು ಕೃಷಿ ಸಂಬಂಧಿತ ಮಸೂದೆಗಳ ವಿಚಾರವು ಚರ್ಚೆಯೇ ಆಗುತ್ತಿಲ್ಲ. ಬದಲಿಗೆ ಜಾತಿ ರಾಜಕಾರಣವೇ ಮುಖ್ಯವಾಗಿದ್ದು, ಅಲ್ಲಿ ಶಿವಸೇನೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಾ ಎನ್ನುವ ಬಗ್ಗೆ 2 ರಿಂದ 3 ದಿನಗಳಲ್ಲಿ ಉದ್ಧವ್ ಠಾಕ್ರೆ ಅವರು ತೀರ್ಮಾನಿಸಲಾಗಿದ್ದಾರೆ.

Breaking ಕೋವಿಡ್ ಭೀತಿಯ ನಡುವೆ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆBreaking ಕೋವಿಡ್ ಭೀತಿಯ ನಡುವೆ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

Uddhav Thackeray Have To Decide On Shiv Sena Contest In Bihar Assembly Election: Sanjay Raut

ಮಾದಕ ದ್ರವ್ಯ ಮೋಹದ ಬಗ್ಗೆ ಉಲ್ಲೇಖ:

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತುಗಳ ನಿಯಂತ್ರಣ ದಳದ ಅಧಿಕಾರಿಗಳ ನಡೆಗೆ ಸಂಸದ ಸಂಜಯ್ ರಾವತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಯಾವ ಕ್ಷೇತ್ರದಲ್ಲಿ ಜನರಿಗೆ ವ್ಯಾಮೋಹ(ಚಟ) ಇರುವುದಿಲ್ಲ ಹೇಳಿ, ಕೆಲವರಿಗೆ ಹಣದ ವ್ಯಾಮೋಹವಿದ್ದರೆ, ಮತ್ತೆ ಕೆಲವರಿಗೆ ಬೇರೆ ಬೇರೆಯ ವಿಚಾರಗಳ ಮೇಲೆ ಹೆಚ್ಚಿನ ವ್ಯಾಮೋಹ ಇರುತ್ತದೆ" ಎಂದು ಸಂಸದ ಸಂಜಯ್ ರಾವತ್ ಪ್ರಶ್ನೆ ಮಾಡಿದ್ದಾರೆ.

English summary
Uddhav Thackeray Have To Decide On Shiv Sena Contest In Bihar Assembly Election: Sanjay Raut.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X