ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದ್ಧವ್ ಠಾಕ್ರೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಂಜಯ ಉವಾಚ

|
Google Oneindia Kannada News

ಮುಂಬೈ, ಜೂನ್ 27: "ನಾವು ಸಾಯಲು ಸಿದ್ಧ, ಆದರೆ ನಮ್ಮ ಪಕ್ಷವನ್ನು ತ್ಯಜಿಸುವುದಿಲ್ಲ" ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಗುಡುಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ತಮ್ಮ ಅರ್ಜಿಯ ವಿಚಾರಣೆ ನಡೆಯುವ ವೇಳೆಗೆ ಮಾಧ್ಯಮಗಳೊಂದಿಗೆ ಮಾತನಾಡಿದರು.

''40 ವರ್ಷಗಳ ಕಾಲ ಪಕ್ಷದಲ್ಲಿದ್ದು ಓಡಿಹೋಗುವವರು ಇದ್ದರೂ ಸತ್ತಂತೆ, ಅವರ ಅಸ್ತಿತ್ವ ಉಳಿದಿಲ್ಲ, ಇದು ಡಾ.ರಾಮ್ ಮನೋಹರ್ ಲೋಹಿಯಾ ಹೇಳಿದ ಸಾಲುಗಳು. ನಾನು ಯಾರ ಭಾವನೆಗೂ ಧಕ್ಕೆ ತರಲು ಬಯಸಿಲ್ಲ, ಸತ್ಯವನ್ನೇ ಹೇಳಿದ್ದೇನೆ'' ಎಂದು ಸಂಸದ ಸಂಜಯ್ ನುಡಿದರು.

ಬಂಡಾಯ ಶಾಸಕ ಏಕನಾಥ್ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಲಾಗಿದೆ. ಶಿವಸೇನೆಯ ಈ ಕ್ರಮದ ವಿರುದ್ಧ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ಕಾನೂನು ಸಮರ ಮೊದಲುಗೊಂಡಿದೆ. ಏಕನಾಥ್ ಶಿಂಧೆ ಮತ್ತು ಬಂಡಾಯ ಶಾಸಕರ ಪರವಾಗಿ ಹರೀಶ್ ಸಾಳ್ವೆ ವಾದ ಮಂಡಿಸುತ್ತಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನೆ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ.

Uddhav Thackeray wont resign, will fight till the very end: Sanjay Raut

ಮಹಾ ಬಿಕ್ಕಟ್ಟು, ಬಿಜೆಪಿ ಹೊಣೆ: ಶಿವಸೇನೆ ಆರೋಪ
ಮಹಾರಾಷ್ಟ್ರದ ಬಂಡಾಯ ಶಿವಸೇನೆ ಶಾಸಕರಿಗೆ ಕೇಂದ್ರವು ವೈ-ಪ್ಲಸ್ ಭದ್ರತೆಯನ್ನು ಒದಗಿಸುತ್ತೆ. ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ಬಿಜೆಪಿ ತನ್ನ ದಾಳ ಉರುಳಿಸುತ್ತಿದೆ ಎಂದು ಪಕ್ಷವು ಸೋಮವಾರ ಹೇಳಿದೆ. ಶಿವಸೇನೆಯ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಸೇನಾ ಶಾಸಕರನ್ನು "ದೊಡ್ಡ ಗೂಳಿಗಳಿಗೆ" ಹೋಲಿಸಲಾಗಿದೆ ಮತ್ತು 50 ಕೋಟಿಗೆ "ಮಾರಾಟ" ಮಾಡಲಾಗಿದೆ ಎಂದು ಆರೋಪಿಸಿದೆ.

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಬಲಾಬಲ:

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಒಬ್ಬ ಶಾಸಕರು ವಿಧಿವಶವಾದ ಹಿನ್ನೆಲೆ ಈ ಸಂಖ್ಯೆಯು 287ಕ್ಕೆ ತಗ್ಗಿದೆ. ಹೀಗಾಗಿ ಸರ್ಕಾರದ ಬಹುಮತಕ್ಕೆ ಕನಿಷ್ಠ 144 ಸ್ಥಾನಗಳು ಬೇಕಾಗುತ್ತದೆ. ಬಿಜೆಪಿಯು 106 ಶಾಸಕರನ್ನು ಹೊಂದುವ ಮೂಲಕ ಅತಿದೊಡ್ಡ ಪಕ್ಷವಾಗಿದೆ. ಆದರೆ 55 ಶಾಸಕರನ್ನು ಹೊಂದಿರುವ ಶಿವಸೇನೆ, 53 ಶಾಸಕರನ್ನು ಹೊಂದಿರುವ ಎನ್ ಸಿಪಿ ಮತ್ತು 44 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಜೊತೆ ಮೂವರು ಶಾಸಕರನ್ನು ಹೊಂದಿರುವ ಬಹುಜನ ವಿಕಾಸ ಅಘಾಡಿ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಮಹಾ ವಿಕಾಸ ಅಘಾಡಿ ಎಂದ ಸಮ್ಮಿಶ್ರ ಸರ್ಕಾರವನ್ನು ರಚಿಸಿವೆ.

ಮಹಾ ವಿಕಾಸ ಅಘಾಡಿ ಒಕ್ಕೂಟವು 169 ಶಾಸಕರ ಬೆಂಬಲವನ್ನು ಹೊಂದಿದೆ. ಇನ್ನೊಂದು ಮಗ್ಗಲಿನಲ್ಲಿ ಬಿಜೆಪಿಯು 106 ಸ್ಥಾನಗಳ ಜೊತೆಗೆ ಮಿತ್ರಪಕ್ಷಗಳು ಹಾಗೂ ಐದು ಇತರೆ ಶಾಸಕರು ಸೇರಿದಂತೆ ಒಟ್ಟು 113 ಶಾಸಕರ ಬೆಂಬಲವನ್ನು ಹೊಂದಿದೆ.

Recommended Video

Kiccha Sudeep ನಿರೀಕ್ಷೆ ಮಾಡದ ಅಪರೂಪದ ಗಿಫ್ಟ್ ಕೊಟ್ಟ ಕ್ರಿಕೆಟ್ ದಂತಕಥೆ ಕಪಿಲ್ ದೇವ್ | *Cricket | OneIndia

English summary
"We will die, but won't abandon our party," said Raut while speaking to media ahead of his plea hearing in the Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X