ಮುಂಬೈ : ನಿರ್ಮಾಣ ಹಂತದ ಕಟ್ಟಡ ಕುಸಿತ, 3 ಸಾವು
ಮುಂಬೈ, ಡಿಸೆಂಬರ್ 23 : ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 9ಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದಾರೆ.
ಭಾನುವಾರ ಮುಂಜಾನೆ ಗೋರೆಗಾಂವ್ ಪ್ರದೇಶದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ತಕ್ಷಣದ ಸ್ಥಳಕ್ಕೆ ಆಗಮಿಸಿದ ಎನ್‌ಟಿಆರ್‌ಎಫ್ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು.
ಅವಶೇಷಗಳಡಿ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಲಾಯಿತು. ಸಿದ್ದಾರ್ಥ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟ ಕಾರ್ಮಿಕರ ಗುರುತು ಇನ್ನೂ ಪತ್ತೆಯಾಗಿಲ್ಲ.

ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅವಶೇಷಗಳ ಅಡಿ ಇನ್ನೂ ಕಾರ್ಮಿಕರು ಸಿಲುಕಿದ್ದಾರೆಯೇ? ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
ಸಿದ್ದಾರ್ಥ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications