Breaking; ಮುಂಬೈನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ
ಮುಂಬೈ, ಸೆಪ್ಟೆಂಬರ್ 17; ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ. 9 ಕಾರ್ಮಿಕರು ಇದುವರೆಗೂ ಗಾಯಗೊಂಡಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಶುಕ್ರವಾರ ಬೆಳಗ್ಗೆ 4.40ರ ಸುಮಾರಿಗೆ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ಈ ಘಟನೆ ನಡೆದಿದೆ. ಹಲವಾರು ಕಾರ್ಮಿಕರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.
ಫ್ಲೈ ಓವರ್ ಕುಸಿದ ಪರಿಣಾಮ ಇದುವರೆಗೂ 9 ಕಾರ್ಮಿಕರು ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿರ್ಮಾಣ ಹಂತದ ಫ್ಲೈ ಓವರ್‌ನ ಒಂದು ಭಾಗ ಕುಸಿದು ಬಿದ್ದಿದೆ. ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
#WATCH | Nine people sustained minor injuries & were taken to a nearby hospital after a portion of an under-construction flyover collapsed in Mumbai's Bandra Kurla Complex at around 4:40 am today, as per a fire brigade official present at the spot
— ANI (@ANI) September 17, 2021
(Latest visuals from the spot) pic.twitter.com/Ddrzw0uzT5
ನಿರ್ಮಾಣ ಹಂತದ ಫ್ಲೈ ಓವರ್ ಕುಸಿದಿರುವ ಪ್ರಕರಣದ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮಂಜುನಾಥ್ ಶಿಂಘೆ ಪ್ರತಿಕ್ರಿಯೆ ನೀಡಿದ್ದಾರೆ. "ಈ ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರೂ ಸಹ ಮೃತಪಟ್ಟಿಲ್ಲ, ಯಾವ ಕಾರ್ಮಿಕರೂ ಸಹ ಕಾಣೆಯಾಗಿಲ್ಲ" ಎಂದು ಹೇಳಿದ್ದಾರೆ.
ನಿರ್ಮಾಣ ಹಂತದ ಫ್ಲೈ ಓವರ್ ಕುಸಿದ ಘಟನೆಯಲ್ಲಿ 14 ಜನರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
Details awaited












Click it and Unblock the Notifications