• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking; ಮುಂಬೈನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ

|
Google Oneindia Kannada News

ಮುಂಬೈ, ಸೆಪ್ಟೆಂಬರ್ 17; ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ಮುಂಬೈನಲ್ಲಿ ನಡೆದಿದೆ. 9 ಕಾರ್ಮಿಕರು ಇದುವರೆಗೂ ಗಾಯಗೊಂಡಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಶುಕ್ರವಾರ ಬೆಳಗ್ಗೆ 4.40ರ ಸುಮಾರಿಗೆ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ಈ ಘಟನೆ ನಡೆದಿದೆ. ಹಲವಾರು ಕಾರ್ಮಿಕರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

ಅವೈಜ್ಞಾನಿಕ ಕಾಮಗಾರಿ: ಭಾರೀ ಮಳೆಗೆ ಮುಳುಗಿದ ಪಂಪ್‌ವೆಲ್ ಫ್ಲೈ ಓವರ್ ಸರ್ವೀಸ್ ರಸ್ತೆಅವೈಜ್ಞಾನಿಕ ಕಾಮಗಾರಿ: ಭಾರೀ ಮಳೆಗೆ ಮುಳುಗಿದ ಪಂಪ್‌ವೆಲ್ ಫ್ಲೈ ಓವರ್ ಸರ್ವೀಸ್ ರಸ್ತೆ

ಫ್ಲೈ ಓವರ್ ಕುಸಿದ ಪರಿಣಾಮ ಇದುವರೆಗೂ 9 ಕಾರ್ಮಿಕರು ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಮೂವರ ದುರ್ಮರಣಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಮೂವರ ದುರ್ಮರಣ

ನಿರ್ಮಾಣ ಹಂತದ ಫ್ಲೈ ಓವರ್‌ನ ಒಂದು ಭಾಗ ಕುಸಿದು ಬಿದ್ದಿದೆ. ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.

ಶೇ 39ರಷ್ಟು ಸಂಚಾರ ದಟ್ಟಣೆ ಕಡಿಮೆ ಮಾಡಲಿದೆ ಬೆಂಗಳೂರಿನ ಈ ಫ್ಲೈ ಓವರ್ ಶೇ 39ರಷ್ಟು ಸಂಚಾರ ದಟ್ಟಣೆ ಕಡಿಮೆ ಮಾಡಲಿದೆ ಬೆಂಗಳೂರಿನ ಈ ಫ್ಲೈ ಓವರ್

ನಿರ್ಮಾಣ ಹಂತದ ಫ್ಲೈ ಓವರ್ ಕುಸಿದಿರುವ ಪ್ರಕರಣದ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮಂಜುನಾಥ್ ಶಿಂಘೆ ಪ್ರತಿಕ್ರಿಯೆ ನೀಡಿದ್ದಾರೆ. "ಈ ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರೂ ಸಹ ಮೃತಪಟ್ಟಿಲ್ಲ, ಯಾವ ಕಾರ್ಮಿಕರೂ ಸಹ ಕಾಣೆಯಾಗಿಲ್ಲ" ಎಂದು ಹೇಳಿದ್ದಾರೆ.

ನಿರ್ಮಾಣ ಹಂತದ ಫ್ಲೈ ಓವರ್ ಕುಸಿದ ಘಟನೆಯಲ್ಲಿ 14 ಜನರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

Details awaited

English summary
Under construction flyover collapsed in Bandra Kurla Complex at Mumbai. Fire brigade official visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X