• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗೋ ಕೊರೊನಾ ಗೋ ಅಂದ್ರೂ ಸಚಿವ ಅಠಾವಳೆಯವರನ್ನು ಬಿಡಲಿಲ್ಲ ಸೋಂಕು

|

ಮುಂಬೈ, ಅಕ್ಟೋಬರ್ 27:ಕೇಂದ್ರ ಸಚಿವ ರಾಮ್‌ದಾಸ್ ಅಠಾವಳೆಗೂ ಕೂಡ ಕೊರೊನಾ ಸೋಂಕು ತಗುಲಿದೆ.

ನನಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ನಾನು ಕೆಲವು ದಿನಗಳವರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ ಎಂದು ರಾಮದಾಸ್ ಅಠಾವಳೆ ಅವರು ಟ್ವೀಟ್ ಮಾಡಿದ್ದಾರೆ.

ಸಿಹಿಸುದ್ದಿ: ಭಾರತದಲ್ಲಿ ಇಳಿಮುಖವಾದ ಕೊರೊನಾವೈರಸ್ ಪ್ರಕರಣ

ನಿನ್ನೆಯಷ್ಟೇ ಬಾಲಿವುಡ್‌ ನಟಿ ಪಾಯಲ್‌ ಘೋಷ್‌ ಅವರು ಕೇಂದ್ರ ಸಚಿವ ರಾಮದಾಸ್‌ ಅಠಾವಳೆ ನೇತೃತ್ವದ ರಿಪಬ್ಲಿಕನ್‌ ಪಾರ್ಟಿ ಆಪ್‌ ಇಂಡಿಯಾಗೆ ಸೇರ್ಪಡೆಯಾಗಿದ್ದರು.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಯಲ್ ಘೋಷ್ ಮತ್ತು ಅಠಾವಳೆ ಜೊತೆಯಾಗಿಯೇ ನಿಂತಿದ್ದರು ಮತ್ತು ಕೇಂದ್ರ ಸಚಿವರು ಮಾಸ್ಕ್ ಅನ್ನು ಪೂರ್ಣ ಪ್ರಮಾಣದಲ್ಲಿ ಧರಿಸದಿರುವುದು ಈಗ ನಟಿ ಸೇರಿದಂತೆ ಪತ್ರಿಕಾಗೋಷ್ಠಿಯಲ್ಲಿದ್ದ ಎಲ್ಲರಿಗೂ ಆತಂಕ ಶುರುವಾಗಿದೆ.

ಅಠಾವಳೆ ಅವರು ಕಳೆದ ಫೆಬ್ರವರಿಯಲ್ಲಿ, ಮುಂಬೈನ ಚೀನಾ ರಾಯಭಾರಿ ಟ್ಯಾಂಗ್ ಗುಯೊಕೈ ಮತ್ತು ಬೌದ್ಧ ಭಿಕ್ಷುಗಳೊಂದಿಗೆ 'ಗೋ ಕೊರೊನಾ ಗೋ' ಎಂದು ಜಪಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

   Rishab Pant ಅವರನ್ನು ODI ಹಾಗು T20 ಇಂದ ಕೈ ಬಿಟ್ಟ BCCI | Oneindia Kannada

   ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

   English summary
   Union Minister Ramdas Athawale, whose 'go corona, go' chant became a national sensation, on Tuesday tested coronavirus positive, an official said.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X