ಕಾಂಗ್ರೆಸ್ ತೊರೆದ ಊರ್ಮಿಳಾ ಮಾತೋಂಡ್ಕರ್ ಶಿವಸೇನೆಗೆ?
Recommended Video
ಮುಂಬೈ, ಸೆಪ್ಟೆಂಬರ್ 17: ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಊರ್ಮಿಳಾ ಮಾತೋಂಡ್ಕರ್ ಶಿವಸೇನೆಗೆ ಸೇರಬಹುದು ಎಂಬ ವದಂತಿ ಹಬ್ಬಿದೆ. ಅದಕ್ಕೆ ಪೂರಕ ಎಂಬಂತೆ ಅವರು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಆಪ್ತಕಾರ್ಯದರ್ಶಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ವರದಿಯಾಗಿದೆ.
ಉದ್ಧವ್ ಠಾಕ್ರೆ ಅವರ ಆಪ್ತಕಾರ್ಯದರ್ಶಿ ಮಿಲಿಂದ್ ನಾರ್ವೇಕರ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಊರ್ಮಿಳಾ ಮಾತೋಂಡ್ಕರ್, ಇದು ಕೇವಲ ಸೌಜನ್ಯದ ಭೇಟಿ, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕಿಯಾಗಿದ್ದ ಪ್ರಿಯಾಂಕಾ ಚತುರ್ವೇದಿ ಅವರೂ, ಪಕ್ಷ ತೊರೆದು ಶಿವಸೇನೆಗೆ ಸೇರಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಗ್ರೆಸ್ ನಲ್ಲಿನ ಆಂತರಿಕ ರಾಜಕಾರಣದಿಂದ ಬೇಸತ್ತು ನಾನು ರಾಜೀನಾಮೆ ನೀಡುತ್ತಿರುವುದಾಗಿ ಊರ್ಮಿಳಾ ಮಾತೋಂಡ್ಕರ್ ಹೇಳಿಕೆ ನೀಡಿದ್ದರು.
ಮುಂಬೈ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಊರ್ಮಿಳಾ ಮಾತೋಂಡ್ಕರ್ ಬಿಜೆಪಿಯ ಗೋಪಾಲ್ ಶೆಟ್ಟಿ ಅವರ ವಿರುದ್ಧ ಸೋಲುಂಡಿದ್ದರು.












Click it and Unblock the Notifications