ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟಿ ಊರ್ಮಿಳಾ ಕಣಕ್ಕೆ

|
Google Oneindia Kannada News

ಮುಂಬೈ, ಮಾರ್ಚ್ 29: ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಊರಮಿಳಾ ಮಾತೋಡ್ಕರ್ ಅವರು ಕಣಕ್ಕಿಳಿಯುವುದು ಖಚಿತವಾಗಿದೆ.

45 ವರ್ಷ ವಯಸ್ಸಿನ ಊರ್ಮಿಳಾ ಹಿಂದಿ ಚಿತ್ರಗಳ ಜೊತೆ ಮಲಯಾಳಂ, ಮರಾಠಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲೂ ಅಭಿನಯಿಸಿದ್ದಾರೆ. 1980 ರಲ್ಲಿ ಝಾಕೋಲ್ ಎಂಬ ಮರಾಠಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು ಕಲಿಯುಗ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ್ದರು.

ಮುಂಬೈ ಉತ್ತರ ಕ್ಷೇತ್ರದಿಂದ ಬಾಲಿವುಡ್ ನಟಿ ಕಾಂಗ್ರೆಸ್ ಅಭ್ಯರ್ಥಿ?ಮುಂಬೈ ಉತ್ತರ ಕ್ಷೇತ್ರದಿಂದ ಬಾಲಿವುಡ್ ನಟಿ ಕಾಂಗ್ರೆಸ್ ಅಭ್ಯರ್ಥಿ?

ಇದೀಗ ರಾಹಕೀಯ ಇನ್ನಿಂಗ್ಸ್ ಆರ್ಭಿಸಿರುವ ಊರ್ಮಿಳಾ ಮಾತೋಡ್ಕರ್ ಅವರ ಸ್ಪರ್ಧೆಯ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯೇ ಅಧಿಕೃತ ಘೋಷಣೆ ಮಾಡಿದೆ. ಮುಂಬೈ ಉತ್ತರ ಕ್ಷೇತ್ರದ ಹಾಲಿ ಸಂಸದ, ಬಿಜೆಪಿಯ ಗೋಪಾಲ್ ಶೆಟ್ಟಿ ಅವರನ್ನು ಎದುರಿಸಲಿದ್ದಾರೆ. 2004ರಲ್ಲಿ ಇದೇ ಕ್ಷೇತ್ರದಿಂದ ನಟ ಗೋವಿಂದ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಆಗಿನ ಪೆಟ್ರೋಲಿಯಂ ಖಾತೆ ಮಾಜಿ ಸಚಿವ ರಾಮ್ ನಾಯ್ಕ್ ಅವರನ್ನು 50,000 ಮತಗಳ ಅಂತರದಿಂದ ಸೋಲಿಸಿದ್ದರು.

Urmila Matondkar to contest from Mumbai North as Congress candidate

2014 ರಲ್ಲಿ ಬಿಜೆಪಿಯ ಗೋಪಾಲ್ ಶೆಟ್ಟಿ ಸ್ಪರ್ಧಿಸಿ, ಕಾಂಗ್ರೆಸ್ ನ ಸಂಜಯ್ ನಿರುಪಮ್ ಅವರನ್ನು ಸೋಲಿಸಿದ್ದರು. ಮುಂಬೈ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸಂಜಯ್ ನಿರುಪಮ್ ಅವರ ಹೆಸರನ್ನು ಕಾಂಗ್ರೆಸ್ ಈ ಬಾರಿ ಪರಿಗಣಿಸದೆ, ಊರ್ಮಿಳಾ ಅವರನ್ನು ಕಣಕ್ಕಿಳಿಸಿದೆ. ಇತ್ತೀಚೆಗಷ್ಟೇ ಸಂಜಯ್ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಮಿಲಿಂದ್ ದೇವೋರಾ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಏಪ್ರಿಲ್ 11 ರಂದು ಆರಂಭವಾಗುವ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಮೇ 19 ರಂದು ಮುಕ್ತಾಯವಾಗಲಿದೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

English summary
Urmila Matondkar to contest from Mumbai North parliamentary constituency on a Congress ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X