ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿ 7ರವರೆಗೂ ವರವರ ರಾವ್‌ಗೆ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆ: ಬಾಂಬೆ ಹೈಕೋರ್ಟ್

|
Google Oneindia Kannada News

ಮುಂಬೈ, ಡಿಸೆಂಬರ್ 19: ಖ್ಯಾತ ಕವಿ ವರವರ ರಾವ್ ಅವರನ್ನು ಮುಂದಿನ ಜನವರಿ 7ರವರೆಗೂ ಮುಂಬೈನ ನಾನಾವತಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರವರ ರಾವ್ ಅವರನ್ನು ಬಂಧಿಸಲಾಗಿತ್ತು.

ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಕೋರಿ ವರವರ ರಾವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ಎಸ್ ಶಿಂದೆ ಮತ್ತು ಎಂಎಸ್ ಕಾರ್ನಿಕ್ ಅವರು, ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಧಿಯನ್ನು ಜನವರಿ 7ರ ವರೆಗೆ ವಿಸ್ತರಿಸಿದ್ದಾರೆ.

ವರವರ ರಾವ್ ಜಾಮೀನು ಅರ್ಜಿ ತಿರಸ್ಕೃತ: ಖಾಸಗಿ ವೈದ್ಯರಿಂದ ತಪಾಸಣೆಗೆ ಸೂಚನೆವರವರ ರಾವ್ ಜಾಮೀನು ಅರ್ಜಿ ತಿರಸ್ಕೃತ: ಖಾಸಗಿ ವೈದ್ಯರಿಂದ ತಪಾಸಣೆಗೆ ಸೂಚನೆ

ವರವರ ರಾವ್ ಅವರ ಪತ್ನಿ ಹೇಮಲತಾ ಅವರು, ತಮ್ಮ ಪತಿಯ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಅವರನ್ನು ಕೂಡಲೇ ನಾನಾವತಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವರವರ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಆದೇಶಿಸಿತ್ತು.

 Varavara Rao To Stay At Private Hospital In Mumbai Till January 7

ವರವರ ರಾವ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ಹೊಸದಾಗಿ ವೈದ್ಯಕೀಯ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

English summary
Jailed poet-activist Varavara Rao, an accused in the Elgar Parishad-Maoist links' case, will continue to remain at Nanavati Hospital in Mumbai till January 7 next year, as the Bombay High Court on Monday extended his stay at the private medical facility.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X