ಮುಂಬೈ: ಮಹಿಳೆಯ ಮೇಲೆ ರೈಲಿನಲ್ಲೇ ದೌರ್ಜನ್ಯ
ಮುಂಬೈ, ಏಪ್ರಿಲ್ 06: ರೈಲಿನಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ದೌರ್ಜನ್ಯ ಎಸಗಲು ಪ್ರಯತ್ನಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಆತಂಕ ಸೃಷ್ಟಿಸಿದೆ.
ಕಲ್ಯಾಣದಿಂದ ದಾದರ್ ಗೆ ಚಲಿಸುತ್ತಿದ್ದ ಮುಂಬೈಯ ಸ್ಥಳೀಯ ರೈಲೊಂದರಲ್ಲಿ ಏ.5 ರಂದು ರಾತ್ರಿ ಈ ಘಟನೆ ನಡೆದಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಆರೋಪಿ ಇಬ್ಬರೂ ಮೊದಲಿನಿಂದಲೂ ಪರಿಚಿತರಾಗಿದ್ದು, ಇಬ್ಬರ ನಡುವೆ ನಿನ್ನೆ ವಾಗ್ವಾದ ಎದ್ದಿತ್ತು. ಇದು ವಿಕೋಪಕ್ಕೆ ತೆರಳಿದ ನಂತರ ವ್ಯಕ್ತಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದದಲ್ಲದೆ ಆಕೆಯನ್ನು ಕತ್ತು ಹಿಸುಕಿ ಸಾಯಿಸಲು ಪ್ರಯತ್ನಿಸಿದ್ದಾನೆ.
#Mumbai: A woman molested by a man onboard a local train, plying from Thane to Chhatrapati Shivaji Terminus railway station, last night. Man arrested at Dadar railway station, case registered. pic.twitter.com/CqePInN2Q3
— ANI (@ANI) April 6, 2018
ಜೊತೆಗಿದ್ದ ಸಹ ಪ್ರಯಾಣಿಕರು ಎಚ್ಚರಿಕೆ ನೀಡಿದರೂ ಆತ ಮಹಿಳೆಯನ್ನು ರೈಲಿನ ಬಾಗಿಲ ಬಳಿ ಕರೆದೊಯ್ದು ಸಾಯಿಸಲು ಪ್ರಯತ್ನಿಸಿದ್ದಾನೆ. ನಂತರ ಪ್ರಯಾಣಿಕರೆಲ್ಲ ಸೇರಿ ಆತನನ್ನು ತಡೆದಿದ್ದಲ್ಲದೆ, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಯನ್ನು ಬಂಧಿಸಿರುವ ಮುಂಬೈ ಪೊಲೀಸರು ಆತನನ್ನು ರಫಿಕ್ ಶೇಖ್ ಎಂದು ಗುರುತಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications