'ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗಲ್ಲ, ರಾಜೀನಾಮೆ ನಿರ್ಧಾರ ಅಚಲ'
ಮುಂಬೈ, ಜುಲೈ 7: ನಾವು ಹದಿಮೂರು ಶಾಸಕರು ಯಾರೂ ರಾಜೀನಾಮೆ ಹಿಂಪಡೆಯುವುದಿಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಇದ್ದೀವಿ. ನಾವು ಯಾರೂ ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಭಾನುವಾರ ಮುಂಬೈನ ಸೋಫಿಟೆಲ್ ಹೋಟೆಲ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಾವು ಆಷ್ಟೂ ಶಾಸಕರು ವಿಧಾನಸಭಾ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ. ಅದನ್ನೇ ರಾಜ್ಯಪಾಲರಿಗೂ ತಿಳಿಸಿದ್ದೇವೆ. ಈಗ ನಾವು ಹತ್ತು ಶಾಸಕರು ಇಲ್ಲಿದ್ದೇವೆ. ರಾಮಲಿಂಗಾ ರೆಡ್ಡಿ, ಮುನಿರತ್ನಂ, ಆನಂದ್ ಸಿಂಗ್ ನಮ್ಮನ್ನು ಬಂದು ಸೇರಿಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ. ನಾವು ಯಾರೂ ಯಾವ ಕಾರಣಕ್ಕೂ ರಾಜೀನಾಮೆಯನ್ನು ಹಿಂಪಡೆಯುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನ ಮತ್ತೊಬ್ಬ ಅತೃಪ್ತ ಶಾಸಕರಾದ ಬಿ.ಸಿ.ಪಾಟೀಲ್ ಮಾತನಾಡಿ, ಸೋಮಶೇಖರ್ ಅವರು ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ. ನಮ್ಮ ಮಾತು ಅಚಲ ಎಂದು ಹೇಳಿದ್ದಾರೆ.

ಶನಿವಾರದಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನ ಒಟ್ಟು ಹನ್ನೆರಡು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.












Click it and Unblock the Notifications