'ನಾನು ಡೊನಾಲ್ಡ್ ಟ್ರಂಪ್ ಅಲ್ಲ' ಎಂದು ತಿರುಗೇಟು ನೀಡಿದ ಮಹಾರಾಷ್ಟ್ರ ಸಿಎಂ

ಮುಂಬೈ, ಜುಲೈ 22: ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ನಿಯಮ ಸಡಿಲಿಕೆ ಹಾಗೂ ಪರೀಕ್ಷೆಗಳ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಟೀಕಾಕಾರರಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಿರುಗೇಟಿ ನೀಡಿದ್ದಾರೆ.

Recommended Video

      America ನಂತರ Indiaದಲ್ಲಿ ಅತಿ ಹೆಚ್ಚು Covid test | Oneindia Kannada

      ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಉದ್ಧವ್ ಠಾಕ್ರೆ ಮಾತನಾಡಿದ್ದು, 'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೀತಿಯಲ್ಲಿ ಜನರು ಕಣ್ಮುಂದೆ ಸಾಯುತ್ತಿದ್ದರೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ, ನಾನು ಡೊನಾಲ್ಡ್ ಟ್ರಂಪ್ ಅಲ್ಲ' ಎಂದು ಹೇಳಿದ್ದಾರೆ.

      ಅಮೆರಿಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಡೊನಾಲ್ಡ್ ಟ್ರಂಪ್ ಯಾವುದೇ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

      What Uddhav Thackeray Said I Am Not Donald Trump

      ಜನರ ಜೀವಕ್ಕಿಂತ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎನ್ನುವ ಟೀಕೆಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಠಾಕ್ರೆ ಪರಿಸ್ಥಿತಿ ನೋಡಿಕೊಂಡು ರಾಜ್ಯದಲ್ಲಿ ಲಾಕ್‌ಡೌನ್ ನಿಯಮ ಸಡಿಲಿಸಲಾಗುತ್ತದೆ. ಸಧ್ಯಕ್ಕೆ ಜನರ ಜೀವವೇ ಮುಖ್ಯವಾಗಿದೆ.

      ಶಾಲೆಗಳ ಪುನರಾರಂಭ,ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ನನಗೂ ಕಾಳಜಿ ಇದೆ. ಸೂಕ್ತ ಸಮಯವನ್ನು ನೋಡಿಕೊಂಡು ಎಲ್ಲಾ ನಿಯಮಗಳನ್ನು ಸಡಿಲಿಸುತ್ತೇವೆ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಆರಂಭಕ್ಕೂ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

      ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಠಾಕ್ರೆ ವಿಫಲರಾಗಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಮೈತ್ರಿ ಪಕ್ಷ ಎನ್‌ಸಿಪಿಯಿಂದಲೂ ಟೀಕೆ ವ್ಯಕ್ತವಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+