ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Weekend Lockdown: ಮಹಾರಾಷ್ಟ್ರದಲ್ಲಿ 3 ದಿನ ಖಾಸಗಿ ಲಸಿಕೆ ಕೇಂದ್ರಗಳಿಗೆ ಬೀಗ!

|
Google Oneindia Kannada News

ಮುಂಬೈ, ಏಪ್ರಿಲ್ 09: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಏರಿಕೆ ನಡುವೆ ಮುಂಬೈನಲ್ಲಿ ಮುಂದಿನ ಮೂರು ದಿನಗಳ ಕಾಲ ಖಾಸಗಿ ಕೊವಿಡ್-19 ಲಸಿಕೆ ಕೇಂದ್ರಗಳು ಬಂದ್ ಆಗಲಿವೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ವಾರಾಂತ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೂ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಖಾಸಗಿ ಕೊವಿಡ್-19 ಲಸಿಕೆ ಕೇಂದ್ರಗಳನ್ನು ಬಂದ್ ಮಾಡಲಾಗುತ್ತಿದ್ದು, ಸರ್ಕಾರಿ ಲಸಿಕೆ ಕೇಂದ್ರಗಳು ಎಂದಿನಂತೆ ತೆರೆದಿರುತ್ತವೆ.

 ಲಸಿಕೆ ಅಭಾವ: ಮೋದಿಗೆ ಪ್ರಚಾರದ ಹುಚ್ಚು ಎಂದು ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿತೇ? ಲಸಿಕೆ ಅಭಾವ: ಮೋದಿಗೆ ಪ್ರಚಾರದ ಹುಚ್ಚು ಎಂದು ಕಾಂಗ್ರೆಸ್ ಸುಳ್ಳು ಮಾಹಿತಿ ನೀಡಿತೇ?

ಕೊರೊನಾವೈರಸ್ ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸುವ ಉದ್ದೇಶದಿಂದ ಕಳೆದ ಏಪ್ರಿಲ್ 4ರಂದು ವಾರಾಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಲಾಗಿತ್ತು. ಈ ಅವಧಿಯಲ್ಲಿ ಕಠಿಣ ನಿಯಮಗಳನ್ನು ಹಾಗೂ ನಿರ್ಬಂಧಗಳನ್ನು ಜಾರಿಗೊಳಿಸುವ ಬಗ್ಗೆ ಚಿವ ನವಾಬ್ ಮಲ್ಲಿಕ್ ಸ್ಪಷ್ಟಪಡಿಸಿದ್ದರು.

ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸ್ಫೋಟ

ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸ್ಫೋಟ

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ನಡುವೆ ರಾಜ್ಯದಲ್ಲಿ ಲಸಿಕೆಯ ಕೊರತೆ ಎದುರಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪುಣೆ, ಸತಾರಾ, ಸೋಲಾಪುರ್ ಜಿಲ್ಲೆಗಳಲ್ಲಿ ಲಸಿಕೆ ಖಾಲಿ ಆಗಿದೆ. ಈ ಹಿನ್ನೆಲೆ 2.5 ಲಕ್ಷ ಡೋಸ್ ಲಸಿಕೆ ನೀಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಲಾಗಿದೆ. ಶುಕ್ರವಾರ ಸಂಜೆ ವೇಳೆಗೆ ನಮಗೆ ಲಸಿಕೆಯನ್ನು ಸರಬರಾಜು ಮಾಡುವ ವಿಶ್ವಾಸವಿದೆ ಎಂದು ಪುಣೆ ವಲಯದ ಉಪ ನಿರ್ದೇಶಕ ಡಾ. ಸಂಜಯ್ ದೇಶ್ ಮುಖ್ ತಿಳಿಸಿದ್ದಾರೆ.

120ರ ಪೈಕಿ 25 ಲಸಿಕೆ ಕೇಂದ್ರಗಳಲ್ಲಿ ಲಸಿಕೆಯೇ ಇಲ್ಲ

120ರ ಪೈಕಿ 25 ಲಸಿಕೆ ಕೇಂದ್ರಗಳಲ್ಲಿ ಲಸಿಕೆಯೇ ಇಲ್ಲ

ಮಹಾರಾಷ್ಟ್ರದಲ್ಲಿ ಲಸಿಕೆ ವಿತರಣೆ ವೇಗವನ್ನು ಹೆಚ್ಚಿಸಲಾಗುತ್ತಿರುವ ಬೆನ್ನಲ್ಲೇ ಲಸಿಕೆ ಅಭಾವ ಎದುರಾಗಿದೆ. ಕೊವಿಡ್-19 ಲಸಿಕೆ ಇಲ್ಲದೇ ಮುಂಬೈನಲ್ಲಿ ಇರುವ 120 ಖಾಸಗಿ ಲಸಿಕೆ ಕೇಂದ್ರಗಳಲ್ಲಿ 25 ಖಾಸಗಿ ಲಸಿಕಾ ಕೇಂದ್ರಗಳನ್ನು ಮುಚ್ಚಲಾಗಿದೆ. ಅದೇ ಮುಂಬೈ ನಗರದಲ್ಲಿ ಶುಕ್ರವಾರ ಕೂಡಾ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 9,200 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 5,00,898ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 35 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಮುಂಬೈನಲ್ಲಿ 90,333 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ವಾರಾಂತ್ಯದ ಲಾಕ್‌ಡೌನ್‌

ಮಹಾರಾಷ್ಟ್ರದಲ್ಲಿ ವಾರಾಂತ್ಯದ ಲಾಕ್‌ಡೌನ್‌

1. ಹೋಟೆಲ್, ರೆಸ್ಟೋರೆಂಟ್, ಬಾರ್ ಬಂದ್; ಪಾರ್ಸೆಲ್‌ಗಳಿಗೆ ಮಾತ್ರ ಅವಕಾಶ

2. ಶಾಪಿಂಗ್ ಮಾಲ್‌ಗಳು, ಧಾರ್ಮಿಕ ಕೇಂದ್ರಗಳು ಬಂದ್

3. ಅಗತ್ಯ ವಸ್ತುಗಳು ಮತ್ತು ಕೈಗಾರಿಕೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ

4. ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಬೇಕು

5. ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಮಂತ್ರಾಲಯಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಅವಕಾಶ

6. ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ, ಆದರೆ ಟ್ಯಾಕ್ಸಿ, ಬಸ್, ಆಟೋಗಳಲ್ಲಿ ಪ್ರಯಾಣಿಕರಿಗೆ ಮಿತಿ ನಿಗದಿ

7. ವಾರಾಂತ್ಯದಲ್ಲಿ ಅಂದರೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 8 ಗಂಟೆವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿ

8. ಯಾವುದೇ ರಾಜಕೀಯ ಸಭೆ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ

9. ಮೂರೂ ಆಡಳಿತ ಪಕ್ಷಗಳು ಸರ್ವಾನುಮತದ ನಿರ್ಧಾರ ಕೈಗೊಂಡು ಬಿಜೆಪಿ ಮತ್ತು ಎಂಎನ್‌ಎಸ್‌ನೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಂಡಿವೆ

English summary
Why Private Vaccination Centres Is Shuted In Next Three Days At Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X