ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಪಾಲಿಕೆ ಚುನಾವಣೆ; ಆಶ್ಚರ್ಯಕಾರಿ ಸುದ್ದಿ ನೀಡಿದ ಅಜಿತ್ ಪವಾರ್

|
Google Oneindia Kannada News

ಬೆಂಗಳೂರು, ಮಾರ್ಚ್ 2: ಈ ವರ್ಷದ ಆರಂಭದಲ್ಲಿ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಗದ್ದುಗೆ ಹಿಡಿದ ಮಹಾ ವಿಕಾಸ್ ಅಗಾಡಿ (ಶೀವಸೇನಾ, ಕಾಂಗ್ರೆಸ್ ಹಾಗೂ ಎನ್‌ಸಿಪಿ) ಈಗ ಮತ್ತೊಂದು ಸುತ್ತಿನ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದೆ.

ಮುಂಬರಲಿರುವ ಬೃಹತ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮಹಾ ವಿಕಾಸ್ ಅಗಾಡಿ ಮೈತ್ರಿಕೂಟ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ತಿಳಿಸಿದ್ದಾರೆ.

ಸಿಎಎ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದಿಲ್ಲ; ಅಜಿತ್ ಪವಾರ್ಸಿಎಎ ವಿರುದ್ಧ ನಿರ್ಣಯ ತೆಗೆದುಕೊಳ್ಳುವುದಿಲ್ಲ; ಅಜಿತ್ ಪವಾರ್

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು 2022 ರಲ್ಲಿ ನಡೆಯುವ ಬಿಎಂಸಿ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಈ ಕುರಿತು ನಮ್ಮ ಕಾರ್ಯಕರ್ತರಿಗೆ ಯಾವುದೇ ಅನುಮಾನ ಗೊಂದಲಗಳು ಬೇಡ. ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಬಿಎಂಸಿ ಅಧಿಕಾರ ನಾವೇ ಹಿಡಿಯಲಿದ್ದೇವೆ. ಬಿಜೆಪಿಯನ್ನೂ ಅಲ್ಲಿಂದಲೂ ಹೊರ ಕಳಿಸಲಾಗುವುದು ಎಂದಿದ್ದಾರೆ.

Will Fight BMC Elections With Maha Vikas Aghadi
ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ. ಸಿಎಎ ಕಾಯ್ದೆಯಿಂದ ಯಾರ ಪೌರತ್ವಕ್ಕೂ ದಕ್ಕೆ ಬರುವುದಿಲ್ಲ. ಯಾರೂ ಬಯಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಕುರಿತು ಮಹಾ ವಿಕಾಸ್ ಅಗಾಡಿ ಅಡಿ ಮೈತ್ರಿ ಪಕ್ಷಗಳು ಚರ್ಚಿಸಿದ್ದು, ವಿಧಾನಸಭೆಯಲ್ಲಿ ನಿರ್ಣಯ ಮಂಡಿಸದಿರಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
English summary
Will Fight BMC Elections With Maha Vikas Aghadi. says maharastra dcm ajit pawar in mumbai on monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X