ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ

|
Google Oneindia Kannada News

ಮುಂಬೈ, ಜನವರಿ 17: ಕರ್ನಾಟಕ ಆಕ್ರಮಿತ ಪ್ರದೇಶವನ್ನು ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಮತ್ತೆ ಗಡಿ ವಿವಾದವನ್ನು ಕೆದಕಿದ್ದಾರೆ.

ಬೆಳಗಾವಿ ಹಾಗೂ ಇತರೆ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದ ಪ್ರಕರಣ ಹಲವು ವರ್ಷಗಳಿಂದ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.

ಮರಾಠಿಗರಿಗೆ ಇಡಬ್ಲ್ಯೂಎಸ್ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆಮರಾಠಿಗರಿಗೆ ಇಡಬ್ಲ್ಯೂಎಸ್ ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ

ಬಹುಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ವಿಷಯಕ್ಕಾಗಿ ಹೋರಾಟ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ ಎಂದು ಟ್ವೀಟ್ ಮಾಡಲಾಗಿದೆ.

Will Incorporate Karnataka-Occupied Areas Into Maharashtra: Uddhav Thackeray

ಗಡಿ ವಿವಾದ ಪ್ರಕರಣವನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಉಸ್ತುವಾರಿ ವಹಿಸಲು ಕಳೆದ ವರ್ಷ ಸಚಿವರಾದ ಏಕನಾಥ್ ಶಿಂಧೆ ಮತ್ತು ಛಗನ್ ಭುಜಬಲ್ ಅವರನ್ನು ಸಮನ್ವಯಕಾರರನ್ನಾಗಿ ಉದ್ಧವ್ ಠಾಕ್ರೆ ನೇಮಿಸಿದ್ದರು.

ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಜನವರಿ 17 ರಂದು ಹುತಾತ್ಮರ ದಿನವನ್ನು ಆಚರಿಸುತ್ತಿದೆ. ಬೆಳಗಾವಿ ಮತ್ತು ಇತರೆ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ 1956ರಲ್ಲಿ ನಡೆದ ಹೋರಾಟದಲ್ಲಿ ಮಡಿದವರ ಗೌರವಾರ್ಥ ಮಹಾರಾಷ್ಟ್ರ ಏಕೀಕರಣ ಸಮಿತಿ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ.

English summary
Maharashtra Chief Minister Uddhav Thackeray on Sunday said his government is committed towards incorporating into the state the areas of Karnataka where Marathi-speaking people are in majority.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X