ಮುಂಬೈನಲ್ಲಿ ಮದುವೆಗೆ ಹೋಗಿದ್ದ ಮಹಿಳೆಗೆ ಕೊರೊನಾ ಸೋಂಕು

ಪುಣೆ, ಮಾರ್ಚ್ 21 : ಮಹಾರಾಷ್ಟ್ರದಲ್ಲಿ ಸುಮಾರು 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಹೊಸದಾಗಿ 3 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಪುಣೆ ಮೂಲದ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ. ಆಕೆಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಕ್ತ ಮತ್ತು ಕಫದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಪುಣೆಯ ಭಾರತಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾಳೆ.

40 ವರ್ಷದ ಮಹಿಳೆ ಯಾವುದೇ ವಿದೇಶದ ಪ್ರವಾಸ ಕೈಗೊಂಡಿರಲಿಲ್ಲ. ಆದರೆ. ಮುಂಬೈನಲ್ಲಿ ನಡೆದ ಮದುವೆಯಲ್ಲಿ ಪಾಲ್ಗೊಂಡಿದ್ದಳು. ಮಾರ್ಚ್ 2ರಂದು ಮುಂಬೈಗೆ ಹೋಗಿದ್ದ ಆಕೆ ವಿವಾಹದಲ್ಲಿ ಭಾಗಿಯಾಗಿದ್ದಳು.

Woman Who Attend Wedding In Mumbai Tested Positive For Coronavirus

ಆರೋಗ್ಯ ಇಲಾಖೆಯ ಕಿಶೋರ್ ರಾಮ್ ಎಂಬ ಅಧಿಕಾರಿ ಈ ಕುರಿತು ಮಾಹಿತಿ ನೀಡಿದ್ದಾರೆ. "ನಾವು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆಕೆ ವಿದೇಶ ಪ್ರವಾಸ ಕೈಗೊಂಡಿರಲಿಲ್ಲ. ವಿದೇಶದಿಂದ ಆಗಮಿಸಿದ ವ್ಯಕ್ತಿಯ ಸಂಪರ್ಕಕ್ಕೆ ಆಕೆ ಬಂದಿರಬೇಕು" ಎಂದು ಹೇಳಿದ್ದಾರೆ.

"ಮಹಿಳೆ ಮುಂಬೈನಲ್ಲಿ ಸಂಚಾರ ನಡೆಸಿದ ಕ್ಯಾಬ್‌ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ತುರ್ತಾಗಿ ತನಿಖೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ" ಎಂದು ಕಿಶೋರ್ ರಾಮ್ ತಿಳಿಸಿದ್ದಾರೆ.

ಶುಕ್ರವಾರ ಪುಣೆಯಲ್ಲಿ 25 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಯುವಕ ಕೆಲವು ದಿನಗಳ ಹಿಂದೆ ಐರ್ಲೆಂಡ್‌ಗೆ ಭೇಟಿ ನೀಡಿದ್ದ. ನಾಯ್ಡು ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+