ಗಲ್ಲಿಗೇರಿಸಲಾದ ಯಾಕೂಬ್ ಅಂತ್ಯಸಂಸ್ಕಾರ ಮುಂಬೈನಲ್ಲಿ
ಮುಂಬೈ, ಜುಲೈ 29 : ನಾಗ್ಪುರ ಜೈಲಿನಲ್ಲಿ ಗಲ್ಲಿಗೇರಿಸಲಾದ ಯಾಕೂಬ್ ಮೆಮನ್ ಅಂತ್ಯ ಸಂಸ್ಕಾರ ಮುಂಬೈನಲ್ಲಿ ನಡೆಯಲಿದೆ. ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗುತ್ತದೆ. ಮುಂಬೈನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಗಲ್ಲಿಗೇರಿಸಿದ ಬಳಿಕ ಮರಣೋತ್ತರ ಪರೀಕ್ಷೆಯನ್ನು ಜೈಲಿನಲ್ಲಿ ನಡೆಸಲಾಗಿದ್ದು ಕುಟುಂಬದವರಿಗೆ 11 ಗಂಟೆಯ ವೇಳೆಗೆ ಶವವನ್ನು ಹಸ್ತಾಂತರ ಮಾಡಲಾಗುತ್ತದೆ. ಬಳಿಕ ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮುಂಬೈನಲ್ಲಿರುವ ಯಾಕೂಬ್ ನಿವಾಸಕ್ಕೂ ಬಿಗಿ ಭದ್ರತೆಯನ್ನು ನೀಡಲಾಗಿದೆ. [ಯಾಕೂಬ್ ಗಲ್ಲು ತಡೆಯಲು ಹೈಡ್ರಾಮ]

ಮೃತದೇಹಕ್ಕಾಗಿ ಮನವಿ : ಯಾಕೂಬ್ ಕುಟುಂಬದವರು ಮೃತದೇಹವನ್ನು ನೀಡುವಂತೆ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಯಾಕೂಬ್ ತಂದೆಯ ಅಂತ್ಯ ಸಂಸ್ಕಾರ ಮಾಡಿದ ಮುಂಬೈನ Marine Lines Muslim Cemetryಯಲ್ಲಿಯೇ ಯಾಕೂಬ್ ಅಂತ್ಯಕ್ರಿಯೆಯೂ ನಡೆಯಲಿದೆ. [ನೇಣಿಗೆ ಕೊರಳೊಡ್ಡಿದ ಯಾಕೂಬ್]
ಜೈಲಿನಂದ ಮೃತದೇಹ ಪಡೆದ ನಂತರ ಯಾಕೂಬ್ ನಿವಾಸಕ್ಕೆ ತೆಗೆದುಕೊಂಡು ಹೋಗಿ, ಅಂತಿಮ ವಿಧಿವಿಧಾನಗಳನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ಯಾಕೂಬ್ ನಿವಾಸವಿರುವ ರಸ್ತೆಯಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. [ಮುಂಬೈ ಬಾಂಬ್ ಸ್ಫೋಟದ Timeline]
ಕುಟುಂಬ ಭರವಸೆ ನೀಡಿದೆ : ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡುವ ಬಗ್ಗೆ ಜೈಲಿನ ಅಧಿಕಾರಿಗಳು ಗೊಂದಲದಲ್ಲಿದ್ದರು. ಗಲ್ಲುಶಿಕ್ಷೆ ವಿಧಿಸಿದ ಕೈದಿಯ ಅಂತ್ಯ ಸಂಸ್ಕಾರವನ್ನು ಜೈಲಿನಲ್ಲಿಯೇ ಮಾಡುವಂತೆ ಯಾಕೂಬ್ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದರು.
ಕುಟುಂಬ ವರ್ಗದವರು ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡುವುದಿಲ್ಲ ಎಂದು ಭರವಸೆ ನೀಡಿದ ಬಳಿಕ, ನಗರದ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸರೊಂದಿಗೆ ಚರ್ಚೆ ನಡೆಸಿದ ಜೈಲಿನ ಅಧಿಕಾರಿಗಳು ಮೃತದೇಹವನ್ನು ಹಸ್ತಾಂತರ ಮಾಡಲು ಒಪ್ಪಿಗೆ ನೀಡಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications