ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಬಂಧನ

|
Google Oneindia Kannada News

ಮುಂಬೈ, ಮಾರ್ಚ್ 08 : ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಣಾ ಕಪೂರ್ ಬಂಧಿಸಿದೆ. 2004ರಲ್ಲಿ ರಾಣಾ ಕಪೂರ್ ಮತ್ತು ಅಶೋಕ್ ಕಪೂರ್ ಯೆಸ್ ಬ್ಯಾಂಕ್ ಸ್ಥಾಪನೆ ಮಾಡಿದ್ದರು.

ಯೆಸ್ ಬ್ಯಾಂಕ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಾಣಾ ಕಪೂರ್‌ರನ್ನು ಜಾರಿ ನಿರ್ದೇಶನಾಲಯ ತೀವ್ರ ವಿಚಾರಣೆ ನಡೆಸುತ್ತಿತ್ತು. ಶನಿವಾರವೂ ಅವರ ವಿಚಾರಣೆ ನಡೆದಿತ್ತು. ಭಾನುವಾರ ಮುಂಜಾನೆ ಅವರನ್ನು ಬಂಧಿಸಲಾಗಿದೆ.

ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟ; ತಿರುಪತಿ ತಿಮ್ಮಪ್ಪನಿಗೆ ಮೊದಲೇ ಗೊತ್ತಿತ್ತಾ?ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟ; ತಿರುಪತಿ ತಿಮ್ಮಪ್ಪನಿಗೆ ಮೊದಲೇ ಗೊತ್ತಿತ್ತಾ?

ದಕ್ಷಿಣ ಮುಂಬೈನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ರಾಣಾ ಕಪೂರ್ ವಿಚಾರಣೆ ನಡೆಯುತ್ತಿತ್ತು. ಶುಕ್ರವಾರ ಸಂಜೆ ರಾಣಾ ಕಪೂರ್ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿತ್ತು.

ಯೆಸ್ ಬ್ಯಾಂಕ್ ಕುರಿತು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟುಯೆಸ್ ಬ್ಯಾಂಕ್ ಕುರಿತು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ (ಡಿಎಚ್‌ಎಫ್‌ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್‌ ವಿಚಾರಣೆ ನಡೆಸಲಾಗುತ್ತಿದೆ. ಡಿಎಚ್‌ಎಫ್‌ಎಲ್‌ಗೆ ಯೆಸ್ ಬ್ಯಾಂಕ್ ಭಾರಿ ಮೊತ್ತದ ಸಾಲ ನೀಡಿದೆ ಎಂಬ ಆರೋಪವಿದೆ.

ಯೆಸ್ ಬ್ಯಾಂಕ್ ಸ್ಥಗಿತ, 3 ಲಕ್ಷ ಕೋಟಿ ನಷ್ಟ, ಡಿಜಿಟಲ್ ಪೇಮೆಂಟ್ ಡೌನ್ಯೆಸ್ ಬ್ಯಾಂಕ್ ಸ್ಥಗಿತ, 3 ಲಕ್ಷ ಕೋಟಿ ನಷ್ಟ, ಡಿಜಿಟಲ್ ಪೇಮೆಂಟ್ ಡೌನ್

ಇಡಿಯಿಂದ ಪ್ರಕರಣ ದಾಖಲು

ಇಡಿಯಿಂದ ಪ್ರಕರಣ ದಾಖಲು

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಕಾಳಧನ ಸಕ್ರಮ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡಿದೆ. ರಾಣಾ ಕಪೂರ್ ದೇಶ ಬಿಟ್ಟು ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ನೀಡಲಾಗಿದೆ.

ಗ್ರಾಹಕರು ಕಂಗಾಲು

ಗ್ರಾಹಕರು ಕಂಗಾಲು

ಯೆಸ್‌ ಬ್ಯಾಂಕ್‌ನಿಂದ ಗ್ರಾಹಕರು ತಿಂಗಳಿಗೆ 50 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಪಡೆಯಬಾರದು ಎಂದು ಆರ್‌ಬಿಐ ನೋಟಿಸ್ ನೀಡಿತ್ತು. ಎಟಿಎಂಗಳಲ್ಲಿ ಈಗ ಹಣ ಸಿಗುತ್ತಿಲ್ಲ, ಬ್ಯಾಂಕ್‌ನಲ್ಲಿ ಚೆಕ್ ಹಣ ಪಡೆಯಲು ಕ್ಯೂ ನಿಲ್ಲಬೇಕು. ಬ್ಯಾಂಕ್‌ನಲ್ಲಿರುವ ತಮ್ಮ ಹಣ ಸಿಗದಿರುವುದು ಗ್ರಾಹಕರಿಗೆ ಆತಂಕ ಉಂಟು ಮಾಡಿದೆ.

ಹಣಕಾಸು ಸಚಿವರ ಸ್ಪಷ್ಟನೆ

ಹಣಕಾಸು ಸಚಿವರ ಸ್ಪಷ್ಟನೆ

"ಯೆಸ್ ಬ್ಯಾಂಕ್‌ನಲ್ಲಿ ಹೂಡಿಕೆ ಮಾಡಿರುವ ಗ್ರಾಹಕರ ಹಣ ಸುರಕ್ಷಿತವಾಗಿದೆ. ಯೆಸ್ ಬ್ಯಾಂಕ್ ಗೊಂದಲ ಬಗೆಹರಿಸಲು ಆರ್‌ಬಿಐ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆರ್‌ಬಿಐ ಗರ್ವನರ್ ಆದಷ್ಟು ಬೇಗ ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಭರವಸೆ ಕೊಟ್ಟಿದ್ದಾರೆ" ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಆರ್ಥಿಕ ಸಂಕಷ್ಟ

ಆರ್ಥಿಕ ಸಂಕಷ್ಟ

ರಾಣಾ ಕಪೂರ್‌ರನ್ನು ಮುಂಬೈನ ಜಾರಿ ನಿರ್ದೇಶನಾಲಯದ ಕಚೇರಿಗೆ ತಂದು ಏಳು ಗಂಟೆಗಳ ತನಕ ವಿಚಾರಣೆಗೆ ಒಳಪಡಿಸಲಾಗಿತ್ತು. ಇಡಿ ಮುಂಬೈನ ಸಮುದ್ರ ಮಹಲ್ ವಸತಿ ಟವರ್‌ನಲ್ಲಿದ್ದ ನಿವಾಸದ ಮೇಲೆ ದಾಳಿ ಮಾಡಿದ ಬಳಿಕ ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿತ್ತು.

English summary
Enforcement Directorate arrested Yes Bank founder Rana Kapoor. Yes Bank Limited is an Indian private sector bank founded by Rana Kapoor and Ashok Kapur in 2004.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X