Yes Bank; ಮಾರ್ಚ್ 16 ರವೆರೆಗೆ ED ವಶಕ್ಕೆ ರಾಣಾ ಕಪೂರ್
ಮುಂಬೈ, ಮಾರ್ಚ್ 11: ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟಕ್ಕೆ ಸಂಬಂಧಿಸಿದಂತೆ ಯೆಸ್ ಬ್ಯಾಂಕ್‌ನ ಸ್ಥಾಪಕ ರಾಣಾ ಕಪೂರ್ ಅವರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮುಂಬೈ ನ್ಯಾಯಾಲಯವು ಕಪೂರ್ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಮಾರ್ಚ್ 16 ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
ಮುಂಬೈ ನಿವಾಸವನ್ನು ಮುಂಬೈ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಶುಕ್ರವಾರ ಸಂಜೆಯಷ್ಟೇ ತಪಾಸಣೆ ನಡೆಸಿದ್ದರು. ಶನಿವಾರ ಬೆಳಿಗ್ಗೆ ರಾಣಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ದೇಶದ ಬ್ಯಾಂಕಿಂಗ್ ವಲಯದಲ್ಲಿ ಯೆಸ್ ಬ್ಯಾಂಕ್ ಬಿರುಗಾಳಿ ಎಬ್ಬಿಸಿದೆ. ಯೆಸ್ ಬ್ಯಾಂಕ್ ದಿವಾಳಿಯಿಂದ ಬ್ಯಾಂಕ್ ಗ್ರಾಹಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬ್ಯಾಂಕ್ ಠೇವಣಿದಾರರು ತಮ್ಮ ಹಣ ವಾಪಸ್ ಸಿಗುತ್ತೋ ಇಲ್ಲವೋ ಎಂದು ಚಿಂತಾಕ್ರಾಂತರಾಗಿದ್ದಾರೆ.

ಎಲ್ಲಾ ಖಾತೆಗಳನ್ನೂ ಒಳಗೊಂಡಂತೆ ಬ್ಯಾಂಕ್ ಗ್ರಾಹಕರು ಮಾರ್ಚ್ 31 ರ ವರಗೆ ಕೇವಲ 50 ಸಾವಿರ ರುಪಾಯಿಗಳನ್ನು ಮಾತ್ರ ಹಿಂತೆಗೆಯಬೇಕು ಎಂದು ಆರ್‌ಬಿಐ ಹೇಳಿದೆ. ಸದ್ಯ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ಆರ್‌ಬಿಐ ವಜಾಗೊಳಿಸಿದೆ. ಎಸ್‌ಬಿಐನ ಮಾಜಿ ಸಿಎಫ್ ಓ ಪ್ರಶಾಂತ್ ಕುಮಾರ್ ಅವರನ್ನು ಆಡಳಿತ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಯೆಸ್ ಬ್ಯಾಂಕ್‌ನ್ನು ಎಸ್‌ಬಿಐನೊಂದಿಗೆ ವಿಲೀನ ಮಾಡಲಾಗುತ್ತಿದೆ ಎನ್ನಲಾಗಿದೆ.












Click it and Unblock the Notifications