• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕು ಹೆಚ್ಚಳ: ರಾತ್ರಿ 8ರ ಬಳಿಕ ಜೊಮ್ಯಾಟೊ, ಸ್ವಿಗ್ಗಿ ಸೇವೆ ಸ್ಥಗಿತ

|

ಮುಂಬೈ, ಏಪ್ರಿಲ್ 6: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8ರ ಬಳಿಕ ಜೊಮ್ಯಾಟೊ, ಸ್ವಿಗ್ಗಿ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಅಷ್ಟೇ ಅಲ್ಲದೆ ನೈಟ್ ಕರ್ಫ್ಯೂನಂತಹ ಹಲವು ನಿರ್ಬಂಧವನ್ನು ಹೇರಲಾಗಿದ್ದು, ಈ ಕಾರಣದಿಂದಾಗಿ ಸಂಜೆ 8 ಗಂಟೆಯ ಬಳಿಕ ಸೇವೆ ನೀಡದಿರಲು ನಿರ್ಧರಿಸಿವೆ.

ಮಹಾರಾಷ್ಟ್ರದಲ್ಲಿ ಭಯ ಹುಟ್ಟಿಸಿದ ಕೊರೊನಾವೈರಸ್ ಅಂಕಿ-ಸಂಖ್ಯೆ

ಜೊಮ್ಯಾಟೋ ಹಾಗೂ ಸ್ವಿಗ್ಗಿ ಬಳಕೆದಾರರ ಮೊಬೈಲ್‌ಗೆ ಈ ಕುರಿತು ಸಂದೇಶ ರವಾನಿಸಲಾಗಿದ್ದು, ರಾತ್ರಿ 8 ಗಂಟೆಯ ನಂತರದ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲೇ 47288 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಒಂದೇ ದಿನ 155 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 26,252 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು 30,57,885 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25,49,075 ಸೋಂಕಿತರು ಗುಣಮುಖರಾಗಿದ್ದು, 56,033 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 4,51,375 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

English summary
Zomato and Swiggy are not taking orders after 8pm in Maharashtra following the state government's announcement of a stricter lockdown. The two food delivery apps sent out notifications to users, asking them to place their orders before 8pm on the first day of the lockdown on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X