ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

By Yashaswini
|
Google Oneindia Kannada News

ಮೈಸೂರು, ಮಾರ್ಚ್ 29 : ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಚುಂಚನಕಟ್ಟೆ ಡ್ಯಾಮ್ ಬಳಿ ನಡೆದಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ |ಚುನಾವಣೆಯ ಮುಖ್ಯ ದಿನಾಂಕಗಳು

ದಾಸನದೊಡ್ಡಿ ಗ್ರಾಮದ ಸಾಗರ್(15) ಹೆಬ್ಸೂರು ಗ್ರಾಮದ ಚೇತನ್ (15), ಮೃತ ಬಾಲಕರು. ಇಬ್ಬರು ಬಾಲಕರು ಚುಂಚನಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದರು.ಈ ನಡುವೆ ನಿನ್ನೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಇಬ್ಬರು ವಿದ್ಯಾರ್ಥಿಗಳು ತಮ್ಮ ಮೂವರು ಸ್ನೇಹಿತರ ಜತೆ ಚುಂಚನಕಟ್ಟೆ ಬಳಿ ನದಿಗೆ ಈಜಲು ಹೋಗಿದ್ದರು. ಈ ಸಂದರ್ಭದಲ್ಲಿ ಇಬ್ಬರು ಸ್ನೇಹಿತರು ಜೆರಾಕ್ಸ್ ಗೆ ಹೋಗಿದ್ದ ಸಂದರ್ಭದಲ್ಲಿ ಈಜಲು ಕಾವೇರಿ ನದಿಗೆ ತೆರಳಿದ್ದಾರೆ.

ಯುಗಾದಿಯಂದು ಪುಣ್ಯಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು ಯುಗಾದಿಯಂದು ಪುಣ್ಯಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ಈ ವೇಳೆ ಈಜಲು ಬಾರದೆ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. ಕೊಡಲೇ ಸ್ನೇಹಿತರು ಗಾಬರಿಗೊಂಡು ಅಲ್ಲಿದ್ದವರಿಗೆ ವಿಚಾರವನ್ನು ತಿಳಿಸಿದ್ದಾರೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

2 children die after drown into water in Mysuru

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರ ಮೃತದೇಹಕ್ಕಾಗಿ ಕಾರ್ಯಚರಣೆ ಮಾಡಿದ್ದು, ಸಾಗರ್ ಮತ್ತು ಚೇತನ್ ಮೃತದೇಹವನ್ನು ಮೇಲೆತ್ತಿದ್ದಾರೆ. ಈ ಘಟನೆ ಸಂಬಂಧ ಕೆ.ಆರ್.ನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
2 students who were swimmig in a lake dies after drowning into it in Mysusru. The incident took place near Chunchanakatte dam in KR Nagar in Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X