ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಬೈಕ್ ಭಸ್ಮ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು ಮಾರ್ಚ್ 17: ಚಲಿಸುತ್ತಿದ್ದ ಕಾರಿನ ಹಿಂಭಾಗದ ಚಕ್ರ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ರಭಸದಿಂದ ಗುದ್ದಿದ ಪರಿಣಾಮ ಐದು ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ತಂತಿ ಸ್ಪರ್ಶಿಸಿದ ಬೈಕೊಂದು ಸಂಪೂರ್ಣ ಭಸ್ಮವಾದ ಘಟನೆ ಮೈಸೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ನಡೆದಿದೆ.[ಮೈಸೂರಿನಲ್ಲಿ ಅಜ್ಜಿ-ತಾತನ ಕೊಲ್ಲಲು ಮನೆಗೆ ಬೆಂಕಿಯಿಟ್ಟ ಮೊಮ್ಮಗಳು!]

A car hits Power pole, Bike burnt in Mysore!

ಗಾಯತ್ರಿಪುರಂ ನಿವಾಸಿ ಸಂತೋಷ್ ಎಂಬವರು ತಮ್ಮ ವರ್ಣಾ ಕಾರಿನಲ್ಲಿ ಚಾಮುಂಡಿ ಬೆಟ್ಟದ ಕಡೆಯಿಂದ ರೇಸ್ ಕೋರ್ಸ್ ರಸ್ತೆಯಲ್ಲಿ ಬರುತ್ತಿದ್ದರು. ಈ ವೇಳೆ ಅವರ ಕಾರಿನ ಹಿಂಭಾದ ಚಕ್ರ ಸ್ಫೋಟಗೊಂಡಿದೆ. ಕಾರು ಅವರ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಲವಾಗಿ ಗುದ್ದಿದೆ. ಗುದ್ದಿದ ರಭಸಕ್ಕೆ 5 ವಿದ್ಯುತ್ ಕಂಬಗಳು ಧರೆಗುರುಳಿವೆ. ಇದೇ ಸಮಯದಲ್ಲಿ ಮಹಾನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭರತ್ ಎಂಬವರು ಇದೇ ಮಾರ್ಗವಾಗಿ ಬೈಕ್ ನಲ್ಲಿ ಸಾಗಿ ಬರುತ್ತಿದ್ದು, ಅದೃಷ್ಟವಶಾತ್ ವಿದ್ಯುತ್ ತಂತಿಗಳು ಉರುಳಿ ಬೀಳುತ್ತಿರುವುದನ್ನು ಕಂಡು ಬೈಕ್ ನಿಂದ ಜಿಗಿದಿದ್ದಾರೆ. ಇದರಿಂದ ಅವರಿಗೆ ಯಾವುದೇ ಅನಾಹುತವಾಗಿಲ್ಲ. ಆದರೆ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಅವರ ಬೈಕ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

A car hits Power pole, Bike burnt in Mysore!

ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಆಗಮಿಸಿದ್ದಾರೆ. ಸಿದ್ದಾರ್ಥನಗರದ ಸಂಚಾರಿಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ, ಚೆಸ್ಕಾಂಗೂ ಮಾಹಿತಿ ನೀಡಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Fire erupted whe a Hyndai Verna car hits Power pole. Another man's bike burnt in the place. Incident took place in Mysuru.
Please Wait while comments are loading...