ಯಮವಾಗಿ ಪ್ರತ್ಯಕ್ಷವಾದ ವಿದ್ಯುತ್ ಕಂಬ: ಬೈಕ್ ಸವಾರ ಸಾವು

Posted By:
Subscribe to Oneindia Kannada

ಮೈಸೂರು, ಅಕ್ಟೋಬರ್ 21: ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರವಾಹನ ಸವಾರ ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪವಿರುವ ಕುರಿಹುಂಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತನನ್ನು ನಂಜನಗೂಡು ತಾಲೂಕಿನ ತರಗನಹಳ್ಳಿ ಗ್ರಾಮದ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಈತನ ಜೊತೆ ಇದ್ದ ಅದೇ ಗ್ರಾಮದವರಾದ ಮಹದೇವು ಮತ್ತು ಪ್ರಕಾಶ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಮೂರು ಜನರು ಮದ್ಯಪಾನ ಮಾಡಿದ್ದು, ದ್ವಿಚಕ್ರವಾಹನ ಆಯ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

A man dies after his bike collides to electric pillar in Mysuru

ಪರಿಣಾಮ ಸ್ಥಳದಲ್ಲೇ ಸವಾರ ಚೇತನ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಅಶೋಕ್ ಕುಮಾರ್ ಮತ್ತು ಸಿಬ್ಬಂದಿ ಲಿಂಗದೇವರು ಆಗಮಿಸಿ ಪರಿಶೀಲನೆ ನಡೆಸಿದರು. ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದೆ. ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳನ್ನು ಮೈಸೂರು ಕೆಆರ್ ಆಸ್ಪತ್ರೆಗೆ ಕಳುಹಿಸಲಾಗಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕೊಳದಲ್ಲಿ ಬಿದ್ದು ವೃದ್ಧ ಆತ್ಮಹತ್ಯೆ
ಕೊಳದಲ್ಲಿ ಬಿದ್ದು ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ವೇಣುಗೋಪಾಲ್ (65)ಎಂದು ಗುರುತಿಸಲಾಗಿದೆ. ನೇತಾಜಿ ನಗರದ ಕೊಳದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಣುಗೋಪಾಲ್ ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯವರು ಮೈಮೇಲೆ ದೆವ್ವ ಬರುತ್ತಿತ್ತು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಕಬ್ಬಿನ ಲಾರಿ ಹರಿದು ರೈತ ಸಾವು
ಕಬ್ಬಿನ ಲಾರಿ ಹರಿದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.
ಟಿ ನರಸೀಪುರ ತಾಲೂಕಿನ ಹ್ಯಾಕನೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ವಾಟಾಳು ಪುರ ಗ್ರಾಮದ ನಿವಾಸಿ ಮಹದೇವಸ್ವಾಮಿ ಮೃತ ಪಟ್ಟ ರೈತ. ತನ್ನದೇ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಮಾರುಕಟ್ಟೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಎರಡು ಎಕರೆ ಜಮೀನಿನಲ್ಲಿ ರೈತ ಮಹದೇವಸ್ವಾಮಿ ಕಬ್ಬು ಬೆಳೆದಿದ್ದರು. ಕಬ್ಬು ತುಂಬಿದ್ದ ಲಾರಿಗೆ ವಿದ್ಯುತ್ ತಂತಿ ಸೋಕದಂತೆ ಮಹದೇವಸ್ವಾಮಿ ನಿಗಾ ವಹಿಸುತ್ತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮಹದೇವಸ್ವಾಮಿ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಕುರಿತು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A man dies after his bike collides to electric pillar in Mysuru. Here are some more crime news from Mysuru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ