ಮೈಸೂರು: ಚೆಸ್ಕಾಂ ಅಧಿಕಾರಿ ಸಿದ್ದಲಿಂಗಸ್ವಾಮಿ ಮನೆ ಮೇಲೆ ಎಸಿಬಿ ದಾಳಿ
ಮೈಸೂರು, ಮೇ 16 : ಅಕ್ರಮ ಆಸ್ತಿ ಸಂಪಾದಿಸಿದ ಆರೋಪದಡಿ ಚೆಸ್ಕಾಂ ಅಧಿಕಾರಿ ಸಿದ್ದಲಿಂಗಸ್ವಾಮಿ ಅವರ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ನಗರದಲ್ಲಿರುವ ಚೆಸ್ಕಾಂ ಅಧಿಕಾರಿ ಸಿದ್ದಲಿಂಗಸ್ವಾಮಿ ಅವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಸಿದ್ದಲಿಂಗಸ್ವಾಮಿ ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಎಸ್ಪಿ ಕವಿತ ಅವರ ನೇತೃತ್ವದ ತಂಡ ದಾಳಿ ಮಾಡಿ ಹಲವು ದಾಖಲೆ ಪರಿಶೀಲನೆ ನಡೆಸುತ್ತಿದೆ.












Click it and Unblock the Notifications