ಮೈಸೂರು : ಪೇಜಾವರರ ಹೇಳಿಕೆ ಖಂಡಿಸಿ ಪ್ರತಿಭಟನೆ

Posted By:
Subscribe to Oneindia Kannada

ಮೈಸೂರು, ನವೆಂಬರ್ 26 : 'ದೇಶದ ಸಂವಿಧಾನ ಬದಲಾವಣೆಗೊಳಪಡಬೇಕು. ಸಂವಿಧಾನದ ರಚನೆಗೆ ಅಂಬೇಡ್ಕರ್ ಒಬ್ಬರೇ ನಿರ್ಮಾತೃವಲ್ಲ' ಎಂಬ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಗಳ ಹೇಳಿಕೆ ಖಂಡಿಸಿ ಇಂದು ಸಮ್ಮೇಳನದಲ್ಲಿ ಪ್ರತಿಭಟನೆ ನಡೆಯಿತು.

ಚಿತ್ರಗಳು : ಮೈಸೂರಲ್ಲಿ 83ನೇ ಸಾಹಿತ್ಯ ಸಮ್ಮೇಳನ ಸಂಭ್ರಮ

ಭಾನುವಾರ ರಾಷ್ಟ್ರಕವಿ ಕುವೆಂಪು ಪ್ರಧಾನ ವೇದಿಕೆಯಲ್ಲಿ ನಡೆಯುತ್ತಿದ್ದ ಗೋಷ್ಠಿಯ ವೇಳೆ ಸಾಹಿತಿಗಳಾದ ಮೀನಾಕ್ಷಿ ಬಾಳಿ, ರಂಜಾನ್ ದರ್ಗ, ಮೂರ್ನಾಕೋಡು ಚಿನ್ನಸ್ವಾಮಿ ಸೇರಿದಂತೆ ಹಲವರು ಪೇಜಾವರರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

'ಪೇಜಾವರಶ್ರೀಗಳ ಕಣ್ಣ ಮುಂದೆಯೇ ರಾಮ ಮಂದಿರ ನಿರ್ಮಾಣ'

Activists protest against Pejawar Swamiji

ಈ ಸಂದರ್ಭ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರು ಸಮಾಧಾನಪಡಿಸಿ ಹೊರಗೆ ಕರೆತಂದರು. ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಪ್ರತಿಭಟನಾಕಾರರು, 'ಈ ರೀತಿ ಹೇಳಿಕೆ ನೀಡುವ ಮೂಲಕ ಪೇಜಾವರ ಶ್ರೀಗಳು ದೇಶಕ್ಕೆ ಯಾವ ಸಂದೇಶ ಕೊಡಲು ಹೊರಟ್ಟಿದ್ದಾರೆ? ಎಂಬುದನ್ನು ಸ್ಪಷ್ಟಪಡಿಸಬೇಕು' ಎಂದು ಆಗ್ರಹಿಸಿದರು.

ಉಡುಪಿ : ಪ್ರಗತಿಪರ ನಿರ್ಣಯಗಳನ್ನು ಅಂಗೀಕರಿಸಿದ 'ಧರ್ಮ ಸಂಸದ್'

'ಸಂವಿಧಾನ ಪುನಾರಚನೆಯಾಗಬೇಕು ಮತ್ತು ಸಂವಿಧಾನವನ್ನು ಬಿ.ಆರ್.ಅಂಬೇಡ್ಕರ್ ಅವರೊಬ್ಬರೇ ಬರೆದಿಲ್ಲ ಎಂಬ ಪೇಜಾವರರ ಹೇಳಿಕೆ ಯಾವ ಅರ್ಥವನ್ನು ನೀಡುತ್ತದೆ. ಸಮಾಜಕ್ಕೆ ಏನು ಸಂದೇಶ ಕೊಡುತ್ತದೆ?. ಇದರ ಹಿಂದಿರುವ ಧರ್ಮ ಸಂಸತ್ ಉದ್ದೇಶವಾದರೂ ಏನು?' ಎಂದು ಪ್ರಶ್ನಿಸಿದರು.

Activists protest against Pejawar Swamiji

ಗೋಷ್ಠಿಯ ವೇಳೆ ಪ್ರತಿಭಟನೆ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಕೆಲವು ಕಾಲ ಗೊಂದಲದ ವಾತಾವವರಣ ನಿರ್ಮಾಣವಾಯಿತು.

ಫುಟ್‌ಪಾತ್ ವ್ಯಾಪಾರಿಗಳ ತೆರವು : ಈ ಮಧ್ಯೆ ಸಾಹಿತ್ಯ ಸಮ್ಮೇಳನದಲ್ಲಿ ಬಾಡಿಗೆ ನೀಡಿ ಮಳಿಗೆಗಳಲ್ಲಿ ವ್ಯಾಪಾರ ನಡೆಸುತ್ತಿರುವವರಿಗೆ ನಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಫುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಇದನ್ನು ಖಂಡಿಸಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Group of progressive thinkers and activists on Sunday staged a protest in front of the main stage of the 83rd Kannada Sahitya Sammelana at Mysuru, condemning the demand by Pejawar Vishweshateertha Swamiji seeking amendment to the constitution.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ