ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುತ್ತೂರು ಮಠದ ಶ್ರೀಗಳ ಆಶೀರ್ವಾದ ಪಡೆದ ರಾಹುಲ್ ಗಾಂಧಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 27 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರದಂದು ಮೈಸೂರಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ‌ ನೀಡಿದರು. ಇಲ್ಲಿನ ಚಾಮುಂಡಿ‌ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಸುತ್ತೂರು ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದರು. ಕಳೆದ ಬಾರಿ‌ ಮೈಸೂರಿಗೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಮಠಕ್ಕೆ‌ ಭೇಟಿ ನೀಡಿರಲಿಲ್ಲ. ಮಠಕ್ಕೆ‌ ಭೇಟಿ ನೀಡದ ವಿಚಾರವು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸುತ್ತೂರು ಮಠವು ಭಾರತದ ಭೂಪಟದಲ್ಲಿದೆ. ಆದರೆ ರಾಹುಲ್ ಪ್ರವಾಸ ಪಟ್ಟಿಯಲ್ಲಿ ಇಲ್ಲ ಎಂದಿದ್ದರು ಸಚಿವ ಮಹದೇವಪ್ಪ.

Rahul Gandhi

ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ, ವಿಧಾನಸಭೆ ಚುನಾವಣೆ ಪ್ರಚಾರದ ಕೊನೆ ಹಂತದಲ್ಲಿ ರಾಹುಲ್ ಗಾಂಧಿಯವರು ಶುಕ್ರವಾರ ಸುತ್ತೂರು ಮಠಕ್ಕೆ ಭೇಟಿ‌ ನೀಡಿ, ಆಶೀರ್ವಾದ ಪಡೆದರು. ಇನ್ನು ಮಂಗಳೂರಿನಲ್ಲಿ ಕಾಂಗ್ರೆಸ್ ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿ

ಬಿಜೆಪಿಯ ಪ್ರಣಾಳಿಕೆಯಲ್ಲಿ ಜನಾರ್ದನ ರೆಡ್ಡಿ ಅವರಿಗೆ ಬೇಕಾದಂಥ ಅಂಶಗಳಿರುತ್ತವೆ ಎಂದು ವ್ಯಂಗ್ಯವಾಡಿದ್ದರು.

English summary
AICC president Rahul Gandhi asks blessings of Suttur seer in Mysuru on Friday. Siddaramaiah and others accompanied him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X