ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬಿಜೆಪಿ ಚಾಣಕ್ಯ ಅಮಿತ್ ಶಾ

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಮಾರ್ಚ್ 31 : ಸಿಎಂ ಸಿದ್ದರಾಮಯ್ಯ ಓರ್ವ ನಿಷ್ಪ್ರಯೋಜಕ. ಕರ್ನಾಟಕದ ವಿಕಾಸಕ್ಕೆ ಸಿದ್ದರಾಮಯ್ಯ ಸ್ಪೀಡ್ ಬ್ರೇಕರ್ ಆಗಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜ್ಯದ ಹಲವಡೆ ಪ್ರವಾಸ ಕೈಗೊಂಡಿದ್ದೇನೆ. ರಾಜ್ಯದ ಎಲ್ಲಡೆ ಬದಲಾವಣೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲ ಕಡೆ ಪಕ್ಷಕ್ಕೆ ಅನುಕೂಲಕರ ವಾತಾವಾರಣ ಇದೆ. ಮೈಸೂರಿನಲ್ಲಿ ಈ ಬಾರಿ ಬಿಜೆಪಿ ಉತ್ತಮ ಫಲಿತಾಂಶ ಕೊಡಲಿದೆ ಎಂದರು.

ಜನಾರ್ಧನ ರೆಡ್ಡಿ ಪಕ್ಷ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ: ಅಮಿತ್ ಶಾಜನಾರ್ಧನ ರೆಡ್ಡಿ ಪಕ್ಷ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ: ಅಮಿತ್ ಶಾ

ಸಿದ್ದರಾಮಯ್ಯ ಸರ್ಕಾರದ ವಿರುದ್ದ ಹಲವು ವಿಚಾರಗಳ ಬಗ್ಗೆ ಜನರ ಆಕ್ರೋಶವಿದೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕೈ ಸರ್ಕಾರದ ಧೋರಣೆಯಿಂದ ಜನರು ರೋಸಿಹೋಗಿದ್ದಾರೆ. ಈ ಬಾರಿ ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನ ಕಿತ್ತೊಗೆಯಲಿದ್ದಾರೆ ಎಂದರು.

Amit Shah lambasted on Siddaramaiah and congress

ರಾಜ್ಯದಲ್ಲಿ ಭ್ರಷ್ಟಾಚಾರದ ಸುನಾಮಿ‌ಯನ್ನು ಜನರು ನೋಡುತ್ತಿದ್ದಾರೆ. ಸಿಎಂ ನೇತೃತ್ವದ ಸರ್ಕಾರ ಭ್ರಷ್ಟಾಚಾರ ಮಾಡಿದೆ. ಜೆಡಿಎಸ್‌ನಿಂದ ಪರಿವರ್ತನೆ ಮಾಡಲು ಆಗುವುದಿಲ್ಲ. ರಾಜ್ಯದಲ್ಲಿ ಪರಿವರ್ತನೆ ಆಗಬೇಕಾದರೆ ಬಿಜೆಪಿಯಿಂದ ಸಾಧ್ಯ ಎಂದು ಅವರು ಹೇಳಿದರು.

ನಾವು ತಳವಾರ, ಪರಿವಾರ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದೇವೆ. 1955 ದೇಶದ ಒಬಿಸಿ ವರ್ಗಗಳ ಶಾಸನಕ್ಕಾಗಿ ಹೋರಾಟ ನಡೆಯುತ್ತಿದೆ. ನರೇಂದ್ರ ಮೋದಿ ಸರ್ಕಾರ ಎರಡು ಪ್ರಮುಖ ಜಾತಿಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಿದ್ದಾರೆ. ಪರಿವಾರ ಹಾಗೂ ತಳವಾರ ಸಮುದಾಯಗಳನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಆದರೆ ಓಬಿಸಿ ಎಂದು ಹೇಳಿಕೊಳ್ಳುವ ಹೇಳಿಕೊಳ್ಳುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಈ ವಿಚಾರದಲ್ಲಿ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಬಿಜೆಪಿಯು ಉತ್ತರ ರಾಜ್ಯಗಳು ಹಾಗೂ ದಕ್ಷಿಣ ರಾಜ್ಯಗಳ ನಡುವೆ ತಾರತಮ್ಯ ಮಾಡುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡಲಾಗಿದೆ. ಅದು ಅಯಾ ರಾಜ್ಯಗಳ ರಾಜ್ಯ ಸರ್ಕಾರಗಳೇ ಮಾಡಿವೆ. ಸಿದ್ದರಾಮಯ್ಯ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಎಟಿಎಂ ಇದ್ದಂತೆ. ಕರ್ನಾಟಕ ಐಟಿ ಹಬ್ ಆಗಿದೆ ಆದರೆ ಗ್ರಾಮೀಣರಿಗೆ ಈ ಸೌಲಭ್ಯ ತಲುಪಿಲ್ಲ. ಕುಡಿಯುವ ನೀರಿಲ್ಲ. 24 ಗಂಟೆ ವಿದ್ಯುತ್ ಇಲ್ಲ. ರೈತರ ಆತ್ಮಹತ್ಯೆಗಳಾಗಿವೆ. ಇಂತಹ ಭೀಕರ ಸನ್ನಿವೇಶವನ್ನು ನಾನು ನನ್ನ ಜೀವನದಲ್ಲಿ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದರು.

English summary
BJP President Amit Shah said 'Siddaramaiah government most corupt government in India. BJP is the only party which has capacity to bring change in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X