ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಕಲಚೇತನರಿಗಾಗಿ ಶ್ರಮಿಸಿದ ಶಿಕ್ಷಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 20: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಂಧರ ಭವಿಷ್ಯ ಕಟ್ಟುತ್ತಿರುವ 'ಅಮೃತ ಬಿಂದು'ಅಂಧರ ಭವಿಷ್ಯ ಕಟ್ಟುತ್ತಿರುವ 'ಅಮೃತ ಬಿಂದು'

'ವಿಶ್ವ ವಿಕಲಚೇತನರ ದಿನಾಚರಣೆ' (ಡಿಸೆಂಬರ್ 3) ಯ ಅಂಗವಾಗಿ 2017-18ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಮೈಸೂರು ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ಅರ್ಹ ವ್ಯಕ್ತಿ, ಸಂಸ್ಥೆ ಮತ್ತು ಶಿಕ್ಷಕರುಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Application for state award from teachers who are busy in social service

ಅರ್ಜಿ ಸಲ್ಲಿಸಲು ನಿಗದಿತ ನಮೂನೆಗಳನ್ನು ಇಲಾಖೆಯ ವೆಬ್‍ ಸೈಟ್ ನಲ್ಲಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅ. 25 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪುಲಿಕೇಶಿ ರಸ್ತೆ, ತಿಲಕ್ ನಗರ, ಮೈಸೂರು-570001 ರವರನ್ನು ದೂರವಾಣಿ ಸಂಖ್ಯೆ 0821-2490333/ 0821-2490111 ರಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

English summary
Department of Karnataka welfare of disabled has invited application from the teachers, who have struggled and are struggling to bring disabled people to main stream for state award 2017-18
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X