ಮೈಸೂರಿನಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ಅಡ್ಡಿ

Posted By:
Subscribe to Oneindia Kannada

ಮೈಸೂರು, ಅಕ್ಟೋಬರ್ 18: ಬೆಂಗಳೂರಿನ ಸಂಪಿಗೆ ಚಿತ್ರ ಮಂದಿರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ಕನ್ನಡ ಪರ ಸಂಘಟನೆಗಳು ತಡೆಯೊಡ್ಡಿವೆ.

ಬುಧವಾರ ಮೈಸೂರಿನ ಪ್ರಭಾ ಸಿನಿಮಾ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿರುವ ತಮಿಳು ಚಿತ್ರಕ್ಕೆ, ತಮಿಳಿಗರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ಕನ್ನಡ ಪರವೇದಿಕೆಯ ಕಾರ್ಯಕರ್ತರು ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡಿ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸುತ್ತಿವೆ.

Attack on Kannadiga: Screening of Tamil movie stopped in Mysore

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸುವಂತೆ ಒತ್ತಾಯಿಸಿವೆ. ಕೊನೆಗೂ ತಮಿಳು‌ ನಟ ವಿಜಯ್ ಚಿತ್ರ ಪ್ರದರ್ಶನ ಸ್ಥಗಿತಗೊಂಡಿದ್ದು, ಥಿಯೇಟರ್ ಮಾಲೀಕ ಕುಂಜಪ್ಪ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Pro-Kannada organisation members stopped the screening of Tamil movie here in the city on Wednesday after the news that a Kannadiga was allegedly manhandled by Tamilians near a theatre in Bengalru spread like wildfire.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ