ಮೈಸೂರಿನ ಅವ್ವಾ ಮಾದೇಶನ ಕೋಟ್ಯಂತರ ರುಪಾಯಿ ಆಸ್ತಿ ಮುಟ್ಟುಗೋಲು

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಜುಲೈ 13 : ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಅವ್ವಾ ಮಾದೇಶ ಮತ್ತು ಆತನ ಸಹೋದರ ಮಂಜುಗೆ ಸೇರಿದ 5.35 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಜೋಡಿ ಕೊಲೆ : ಜೆಡಿಎಸ್ ನಗರಸಭಾ ಸದಸ್ಯನಿಗೆ ಜೀವಾವಧಿ ಶಿಕ್ಷೆ

ಮೈಸೂರು ನಗರದ ವಿವಿಧೆಡೆ ಇರುವ ಕಟ್ಟಡ ಮತ್ತು ಇನ್ನಿತರ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

Avva Madesha's property seized by Enforcement Directorate

ಪ್ರಕರಣದ ಹಿನ್ನೆಲೆ : ಹುಣಸೂರು ಬಳಿ 2008ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಮಾದೇಶ, ಮಂಜು ಸೇರಿ 8 ಮಂದಿಗೆ 2016ರಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆ ಕೊಲೆ ನಡೆದಿತ್ತು.

ಈ ಪ್ರಕರಣದಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿರುವ ಸಂದೇಹದಲ್ಲಿ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿತ್ತು.

ಕೊಲೆ, ಸುಲಿಗೆ ಮತ್ತು ಬೆದರಿಕೆ ಹಾಕಿ ಅವ್ವಾ ಮಾದೇಶ ಅಪಾರ ಹಣ ಗಳಿಸಿದ್ದು, ಅದನ್ನು ಕುಟುಂಬ ಸದಸ್ಯರ ಹೆಸರಿನಲ್ಲಿ ವಿವಿಧೆಡೆ ಹೂಡಿಕೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಈ ಕಾರಣಕ್ಕೆ ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Rowdy sheeter Avva Madesha who is sentenced life time imprisonment in a murder case is facing a new problem. As he has more properties than his income, according to High Court order Enforcement Directorate seizes his wealth. He said to have accumulated assets worth Rs 5.5 crore.
Please Wait while comments are loading...