ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಹೊಸ ಮೊಬೈಲ್ ಆಪ್

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಡಿಸೆಂಬರ್, 29: ಪ್ರತಿದಿನ ರಾಜ್ಯದಲ್ಲಿ ಮಹಿಳೆಯರಿಗೆ ಅಸುರಕ್ಷತಾ ಭಾವ ಕಾಡುತ್ತಿದೆ. ಹಲವಾರು ದೌರ್ಜನ್ಯಗಳಿಗೆ ಒಳಗಾದ ಮಹಿಳೆಯರ ಬದುಕು ನರಕ ಸದೃಶವಾಗಿದೆ. ಇದರ ನಿವಾರಣೆಗೆ ಪೊಲೀಸ್ ಇಲಾಖೆ ನೂತನ ಮೊಬೈಲ್ ಆಪ್ ಸಿದ್ಧ ಪಡಿಸಿದೆ.

ಪತ್ರಕರ್ತರ ಭವನದಲ್ಲಿ ನಡೆದ ಲಾಗೈಡ್ ಪ್ರಪ್ರಥಮ ಕನ್ನಡ ಕಾನೂನು ಮಾಸಪ್ರತಿಕೆ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇತ್ತೀಚೆಗೆ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ, ದೌರ್ಜನ್ಯಗಳು ಜರುಗುತ್ತಿದೆ. ಇದನ್ನು ತಡೆಗಟ್ಟಲು ಜಾರಿಗೆ ತಂದಿರುವ ನೂತನ ಆಪ್ ಬಳಸಿಕೊಂಡು ಮಹಿಳೆಯರು ತಮ್ಮ ದೂರನ್ನು ದಾಖಲಿಸಬಹುದು ಎಂದು ಬೆಂಗಳೂರು ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ತಿಳಿಸಿದರು.[ಫೇಸ್ಬುಕ್, ಟ್ವಿಟ್ಟರ್ನಿಂದ ಡೈವೋರ್ಸ್ ತಗೊಳೋದು ಹೇಗೆ?]

Bengaluru police develops new mobile app for women safety

ಹೊರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಅಪರಾಧ ಪ್ರಕರಣ ಕಡಿಮೆ ಪ್ರಮಾಣದಲ್ಲಿದೆ. ದೌರ್ಜನ್ಯ, ಅತ್ಯಾಚಾರದಂಥ ಪ್ರಕರಣಗಳು ಮೊದಲಿನಿಂದಲೂ ನಡೆಯುತ್ತಿದ್ದವು. ಇದನ್ನು ತಡೆಯಲು ಕೆಲವು ಕಠಿಣ ಕಾನೂನುಗಳು ತೊಡಕಾಗಿದ್ದವು.[ಧಮ್ ಹೊಡೆಯೋದ್ರಲ್ಲೂ ಮಹಿಳೆಯರದ್ದೇ ಮೇಲುಗೈ!]

ಐಪಿಸಿ ಸೆಕ್ಷನ್ ನಲ್ಲಿ ಕೆಲವೊಂದು ತಿದ್ದುಪಡಿ ತಂದ ಬಳಿಕ ಇಂಥ ಪ್ರಕರಣಗಳಲ್ಲಿ ಸಿಲುಕಿಕೊಂಡ ಮಹಿಳೆಯರು ಧೈರ್ಯವಾಗಿ ಬಂದು ದೂರು ಸಲ್ಲಿಸುತ್ತಿದ್ದಾರೆ ಎಂದು ಮಹಿಳೆಯರ ಧೈರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru police develops new mobile app for women safety. It helps to avoid sexual assault, rape etc.
Please Wait while comments are loading...