ಮೋದಿ ಬಗ್ಗೆ ಮಾತನಾಡುವ ಯೋಗ್ಯತೆ ಸಿದ್ದರಾಮಯ್ಯನವರಿಗಿಲ್ಲ: ಈಶ್ವರಪ್ಪ

Posted By: ಯಶಸ್ವಿನಿ ಎಂ.ಕೆ
Subscribe to Oneindia Kannada

ಮೈಸೂರು, ನವೆಂಬರ್ 02 : ಸಿಎಂ ದೇಶದ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಮಾತಗಳನ್ನಾಡುತ್ತಿದ್ದಾರೆ. ದೇಶದ ಪ್ರಧಾನಿಯ ಕುರಿತು ಹಗುರವಾಗಿ ಮಾತನಾಡುವ ಎಳ್ಳಷ್ಟೂ ಯೋಗ್ಯತೆ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೇಂದ್ರ ಕೊಟ್ಟ ಅನುದಾನದ ಬಗ್ಗೆ ಸಿದ್ದರಾಮಯ್ಯ ಪ್ರಶ್ನಿಸಿದ ಅಮಿತ್ ಶಾ

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಖಾಸಗಿ ಹೊಟೇಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, 'ನನ್ನ ಕಂಡರೆ ಮೋದಿಗೆ ಭಯ' ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದರು. 'ಮುಖ್ಯಮಂತ್ರಿಗಳು ದೇಶದ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆಕಾಶಕ್ಕೆ ಉಗಿದ ಉಗುಳು ತನ್ನ ಮೇಲೆ ಬೀಳೋದಿಲ್ಲ ಎಂದು ತಿಳಿದುಕೊಂಡಿದ್ದಾರೆ. ಅದು ಯಾವಾಗ ತಿರುಗಿ ಬೀಳುತ್ತದೆ ಕಾದು ನೋಡಿ' ಎಂದು ತಿರುಗೇಟು ನೀಡಿದ್ದಾರೆ.

BJP Leader K S Eishwarappa, responds to the statement of CM Siddaramaiah in Mysuru

ವಿಜಯಶಂಕರ್ ಬಿಜೆಪಿ ಪಕ್ಷ ತೊರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾವ ಕಾರಣಕ್ಕೆ ವಿಜಯಶಂಕರ್ ಪಕ್ಷ ಬಿಟ್ಟರೋ ನನಗೆ ಗೊತ್ತಿಲ್ಲ. ಪಕ್ಷ ವಿಜಯಶಂಕರ್ ಗೆ ಎಲ್ಲವನ್ನೂ ನೀಡಿತ್ತು. ಪಕ್ಷದ ಬಗ್ಗೆ ಮಾತನಾಡುವಾಗ ಎಲ್ಲಾ ಚೆನ್ನಾಗಿತ್ತ ಎಂದು ಪ್ರಶ್ನಿಸಿದ್ದಾರೆ. ನನ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ ಅಂತಾರೆ. ಮುಂದಿನ ಚುನಾವಣೆಯಲ್ಲಿ ಮತದಾರ ತಕ್ಕ ಪಾಠ ಕಲಿಸಲಿದ್ದಾನೆ ಎಂದರು. ಉಪೇಂದ್ರ, ಅನುಪಮಾ ಶೆಣೈ ಹೊಸ ಪಕ್ಷ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪಕ್ಷ ಕಟ್ಟುವ ಅಧಿಕಾರವಿದೆ. ಅಂತಹ ಪಕ್ಷಗಳು ಎಷ್ಟು ಉಳಿಯಲಿವೆ ಎಂಬುದನ್ನು ಚುನಾವಣೆ ಬಳಿಕ ಕಾದು ನೋಡಿ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief Minister Siddaramaiah Speaks lightly about Prime Minister of India: KS Eshwarappa

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ