ಮೀಸಲು ಬದಲು ಮೈಸೂರು ಮೇಯರ್‌ಗಿರಿ ಕಾಂಗ್ರೆಸ್‌ಗೆ!

Posted By:
Subscribe to Oneindia Kannada

ಮೈಸೂರು, ಜನವರಿ 09 : ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಪ್ರಸಕ್ತ ಅವಧಿಯ ಕೊನೆ ಚುನಾವಣೆಯಲ್ಲಿ ಯಾರು ಆಯ್ಕೆಯಾಗುತ್ತಾರೆ? ಎಂಬುದು ಕುತೂಹಕ್ಕೆ ಕಾರಣವಾಗಿದೆ.

ಜನವರಿ 24ರಂದು ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಪರಿಶಿಷ್ಟ ಜಾತಿಯ ಮಹಿಳೆ, ಉಪ ಮೇಯರ್ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಗೆ ನಿಗದಿಯಾಗಿದೆ.

ಜನವರಿ 2ರಂದು ಸರ್ಕಾರ ಮೀಸಲಾತಿ ನಿಗದಿ ಮಾಡಿ ಆದೇಶ ಹೊರಡಿಸಿತ್ತು. ಚುನಾವಣಾ ದಿನಾಂಕ ನಿಗದಿ ಮಾಡಿ ಎಂದು ಪಾಲಿಕೆ ಆಯುಕ್ತರು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು.

Mysuru

ಈಗ ಮೇಯರ್ ಮತ್ತು ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಅವಧಿಯ ಕೊನೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪ ಮೇಯರ್ ಪಟ್ಟ ಕಾಂಗ್ರೆಸ್‌ ಪಾಲಾಗುವುದು ಖಚಿತವಾಗಿದ್ದು, ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.

4 ವರ್ಷಗಳಿಂದ ಪಾಲಿಕೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಆಡಳಿತವಿದೆ. ಆದರೆ, ಮೀಸಲಾತಿಯಲ್ಲಿ ಬದಲಾವಣೆ ಮಾಡಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ.

ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಮೀಸಲು ಕ್ಷೇತದಿಂದ ಆಯ್ಕೆಯಾದ ಯಾವುದೇ ಸದಸ್ಯೆ ಇಲ್ಲ. ಆದ್ದರಿಂದ, ಕಾಂಗ್ರೆಸ್‌ ಹಾದಿ ಸುಲಭವಾಗಿದೆ. ಉಪ ಮೇಯರ್ ಸ್ಥಾನ ಜೆಡಿಎಸ್‌ಗೆ ಒಲಿದು ಬರಬಹುದು.

ಕಾಂಗ್ರೆಸ್ ಸದಸ್ಯರಾದ ಕಮಲಾ ಉದಯ್ (ವಾರ್ಡ್ ನಂ 50), ಭಾಗ್ಯವತಿ (ವಾರ್ಡ್ ನಂ.23) ಇಬ್ಬರಲ್ಲಿ ಒಬ್ಬರು ಮೇಯರ್ ಆಗುವುದು ಬಹುತೇಕ ಖಚಿತವಾಗಿದೆ.

ಉಪ ಮೇಯರ್ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದ್ದು, ಈ ವರ್ಗದಿಂದ ಆಯ್ಕೆಯಾಗಿರುವ ಏಕೈಕ ಮಹಿಳೆ ಇಂದಿರಾ ಮಹೇಶ್ (ವಾರ್ಡ್ ನಂ.61) ಉಪ ಮೇಯರ್ ಹುದ್ದೆ ಪಡೆಯಬಹುದು ಎಂಬುದು ಲೆಕ್ಕಾಚಾರ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka government has announced the roster of reservation for the posts of Mayor and Deputy Mayor for Mysuru city corporation. BJP will lost the post of Mayor in the election scheduled on January 9, 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ