ಬಿಜೆಪಿ ಕಾರ್ಯಕರ್ತ ಮಾಗಳಿ ರವಿ ಅನುಮಾನಾಸ್ಪದ ಸಾವು

By: ಒನ್ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮೈಸೂರು, ನವೆಂಬರ್ 5: ಪಿರಿಯಾಪಟ್ಟಣದ ಯುವ ಮೋರ್ಚಾ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮಾಗಳಿ ರವಿ ಅನುಮಾನಾಸ್ಪದ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ವಾಹನದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂಬಂತೆ ಕಂಡುಬರುತ್ತಿದ್ದು, ಬಿಜೆಪಿ ಕಾರ್ಯಕರ್ತರು ಕೊಲೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

ಮಾಗಳಿ ರವಿ ಬಿಜೆಪಿ ಹಾಗೂ ಆರ್ ಎಸ್ ಎಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು. ರಿಯಲ್ ಎಸ್ಟೇಟ್ ವ್ಯವಹಾರ ಜತೆಗೆ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯಕ್ಕೆ ಪಿರಿಯಾಪಟ್ಟಣದ ಆಸ್ಪತ್ರೆಗೆ ಶವವನ್ನು ತರಲಾಗಿದ್ದು, ಮುಖದ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದೆ. ದೇಹದ ಇತರ ಭಾಗದಲ್ಲಿ ಗಾಯಗಳು ಆಗಿವೆಯೇ ಎಂಬುದು ಗೊತ್ತಾಗಬೇಕಿದೆ. ಆದರೆ ಮರಣೋತ್ತರ ಪರೀಕ್ಷೆ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ.[ರುದ್ರೇಶ್ ಕೊಲೆ ಹಿಂದೆ ಬೇಗ್ ಕೈವಾಡ: ಕರಂದ್ಲಾಜೆ]

Magali Ravi

ಪಿರಿಯಾಪಟ್ಟಣದಿಂದ ತಮ್ಮ ಸ್ವಗ್ರಾಮ ಮಾಗಳಿಗೆ ರವಿ ತೆರಳುತ್ತಿದ್ದಾಗ ಮಧ್ಯರಾತ್ರಿ ವೇಳೆ ಈ ಘಟನೆ ಸಂಭವಿಸಿದೆ. ಆದರೆ ರವಿ ಒಬ್ಬರೇ ಇದ್ದರೆ, ಜತೆಯಲ್ಲಿ ಮತ್ತ್ಯಾರಾದರೂ ಇದ್ದರೆ ಎಂಬುದು ತಿಳಿದುಬಂದಿಲ್ಲ. ಬಿಜೆಪಿ ಕಾರ್ಯಕರ್ತರು ಮಾತ್ರ ಇದು ಅನುಮಾನಾಸ್ಪಾದ ಸಾವು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಅಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP and RSS member Magali Ravi dies suspiciously in Piriyapatna, Mysuru on Friday night. BJP party workers demanding for probe.
Please Wait while comments are loading...