ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ, ನಾಲ್ವರು ಶಂಕಿತರ ಬಂಧನ

Posted By:
Subscribe to Oneindia Kannada

ಮೈಸೂರು, ಆಗಸ್ಟ್ 08 : ಬಿಜೆಪಿ ಕಾರ್ಯಕರ್ತ ರಾಜು ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. 2016ರ ಮಾರ್ಚ್ 13ರಂದು ನಡೆದ ರಾಜು ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಸಿಸಿಬಿ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಿಂದ ಕಾರು, ಬೈಕ್ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ದೂರವಾಣಿ ಕರೆಗಳ ಮಾಹಿತಿ ಅನ್ವಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.[ರಾಜು ಕೊಲೆ ಪ್ರಕರಣದ ತನಿಖೆ ಸಿಸಿಬಿಗೆ]

BJP worker Raju murder case : Four suspects arrested

2016ರ ಮಾರ್ಚ್ 13ರ ಭಾನುವಾರ ಸಂಜೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶ್ವ ಹಿಂದೂಪರಿಷತ್, ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿತ್ತು.[ಮೈಸೂರಲ್ಲಿ ರಾಜು ಹತ್ಯೆ : ಯಾರು, ಏನು ಹೇಳಿದರು?]

ಹಿಂಸಾಚಾರ ನಡೆದಿತ್ತು : ರಾಜು ಹತ್ಯೆ ಖಂಡಿಸಿ ಕರೆ ನೀಡಿದ್ದ ಮೈಸೂರು ಬಂದ್ ವೇಳೆ ಹಿಂಸಾಚಾರ ನಡೆದಿತ್ತು. ರಾಜು ಅವರ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ನೂರಾರು ಜನರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಪ್ರತಿಪಕ್ಷಗಳು ಒತ್ತಾಯಿಸಿದ್ದವು.[ಕರ್ನಾಟಕದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ: ಪ್ರತಾಪ್ ಸಿಂಹ]

ರಾಜು ಹತ್ಯೆ ಪ್ರಕರಣ ರಾಜಕೀಯ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪಗಳಿಗೆ ವೇದಿಕೆಯಾಗಿತ್ತು. ಬಿಜೆಪಿ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Mysuru City Crime Branch(CCB) police arrested four accused in connection with the BJP worker Raju murder case. Raju murderd in Mysuru Udaygiri police station limits on March 13th, 2016.
Please Wait while comments are loading...